ಇತ್ತೀಚಿನ ಸುದ್ದಿ
ಭಾಗಮಂಡಲ ಗೌಡ ಸಮಾಜ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ: ಸಮುದಾಯ ಭವನಕ್ಕೆ ಮನವಿ
15/07/2025, 19:34

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಭಾಗಮಂಡಲ ಗೌಡ ಸಮಾಜ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಭಾಗಮಂಡಲ ಗ್ರಾಮದಲ್ಲಿ 1983ರಲ್ಲಿ ನಿರ್ಮಿಸಿರುವ ಗೌಡ ಸಮುದಾಯದ ಕೇಂದ್ರದ ಮೂಲ ಸೌಲಭ್ಯ ಮತ್ತು ಎಲ್ಲ ಜಾತಿ-ಧರ್ಮದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ಸಮುದಾಯ ಭವನದ ನಿರ್ಮಿಸಲು ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದರು. ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್ ಪೊನ್ನಣ್ಣ ನೇತೃತ್ವದಲ್ಲಿ ಭಾಗಮಂಡಲ ನಾಡಗೌಡ ಸಮಾಜದ ಅಧ್ಯಕ್ಷರಾದ ಕುದ್ಪಾಜೆ ಪಿ ಪಳಂಗಪ್ಪರವರ ನಿಯೋಗ.
ಈ ನಿಯೋಗದಲ್ಲಿ,ಗೌಡ ಸಮಾಜದ ಪ್ರಮುಖರಾದ ಹೊಸೂರು ಸತೀಶ್ ಜೋಯಪ್ಪ, ಪ್ರಕಾಶ್ ಕುದ್ಪಾಜೆ, ದೇವಂಗೋಡಿ ಹರ್ಷ, ಕುಯ್ಯಮುಡಿ ರಂಜು ನಿಡ್ಯಮಲೆ ರವಿ, ಕುದ್ಪಾಜೆ ಗಗನ್, ನಿಡ್ಯಮಲೆ ದಾಮೋದರ, ಅಮೆ ಹರೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.