1:29 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಭಗವದ್ಗೀತೆ ರಾಷ್ಟ್ರೀಯ ಗ್ರಂಥವೆಂದು ಘೋಷಿಸಲು ಕೇಂದ್ರ ಸರಕಾರ ಚಿಂತನೆ: ಸಂಸದ ಗೋಪಾಲ್ ಶೆಟ್ಟಿ ಪ್ರಸ್ತಾವನೆ

09/09/2022, 20:03

ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರವು ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸುವ ಚಿಂತನೆಯಲ್ಲಿದೆ. ಆ ಮೂಲಕ ರಾಷ್ಟ್ರಗೀತೆ, ರಾಷ್ಟ್ರಧ್ವಜದಂತೆ ದೇಶದಲ್ಲಿ ಶೀಘ್ರದಲ್ಲೇ ರಾಷ್ಟ್ರ ಪುಸ್ತಕ ಬರಲಿದೆ.

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದು, ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ಕಳುಹಿಸಿದ ಪತ್ರದ ಆಧಾರದ ಮೇಲೆ ಸರ್ಕಾರ ಈ ಕಾರ್ಯವನ್ನು ಅನುಷ್ಠಾನಗೊಳಿಸುವ ಯೋಚನೆಯಲ್ಲಿದೆ.

ಜುಲೈ 5 ರಂದು ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ , ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದಿದ್ದು, ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವಂತೆ ಗೃಹ ಸಚಿವರನ್ನು ಒತ್ತಾಯಿಸಿದ್ದರು. ಗೃಹ ಸಚಿವ ಶಾ ಅವರು ಜುಲೈ 18 ರಂದು ಈ ಪತ್ರಕ್ಕೆ ಉತ್ತರ ಕಳುಹಿಸಿದ್ದು, ತಮ್ಮ ಪತ್ರವನ್ನು ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಸಚಿವಾಲಯಗಳಿಗೆ ಕಳುಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಗೃಹ ಸಚಿವಾಲಯವು ಈ ವಿಷಯದಲ್ಲಿ ಶಿಕ್ಷಣ ಸಚಿವಾಲಯದ ಅಭಿಪ್ರಾಯವನ್ನು ಕೇಳಿದೆ. ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವ ಬಗ್ಗೆ ಶಿಕ್ಷಣ ಸಚಿವಾಲಯವು ಆಗಸ್ಟ್ 10 ರಂದು ತನ್ನ ಹೇಳಿಕೆಗಳನ್ನು ಕಳುಹಿಸಿದೆ ಎನ್ನಲಾಗಿದೆ. ಇದರ ನಂತರ, ಗೃಹ ವ್ಯವಹಾರಗಳ ಸಚಿವಾಲಯವು ಈಗ ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಪುಸ್ತಕವಾಗಿ ಘೋಷಿಸುವ ಬಗ್ಗೆ ಸಂಸ್ಕೃತಿ ಸಚಿವಾಲಯದ ಅಭಿಪ್ರಾಯವನ್ನು ಕೇಳಿದ್ದು,ಅಲ್ಲಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರಕಿದೆ ಎಂಬ ಮಾಹಿತಿ ದೊರಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು