12:20 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಭಾರತವು ಮಧುಮೇಹದ ರಾಜಧಾನಿಯೇ?: ಇದರ ನಿಯಂತ್ರಣಕ್ಕೆ ಏನು ಮಾಡಬೇಕು? ಮುಂದಕ್ಕೆ ಓದಿ  

14/11/2021, 09:19

ಕಾರ್ಕಳ(reporterkarnataka.com):  ಮಧುಮೇಹ ಕಾಯಿಲೆ ಪ್ರಾರಂಭದಲ್ಲಿ ಯಾವುದೇ ಲಕ್ಷಣಗಳನ್ನು ತೋರಿಸುವುದಿಲ್ಲ, ಇದನ್ನು ಪತ್ತೆಹಚ್ಚಲು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ನಿಯಮಿತವಾದ ಆಹಾರ ಸೇವನೆ,  ನಿಯಮಿತವಾದ ವ್ಯಾಯಾಮ ಮತ್ತು ಮನಸ್ಸಿನ ನಿಗ್ರಹದಿಂದ ಮಧುಮೇಹವನ್ನು ಹತೋಟಿಯಲ್ಲಿಡಬಹುದು ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಸಭಾಪತಿಯಾದ ಡಾ.ಕೆ. ರಾಮಚಂದ್ರ ಜೋಶಿ ಹೇಳಿದರು.

ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ, ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಮತ್ತು ಶ್ರೀ ಭುವನೇಂದ್ರ ಮೆಡಿಕಲ್ ಮಿಷನ್  ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಕಾರ್ಯಾಲಯದಲ್ಲಿ ನಡೆದ “ವಿಶ್ವ ಮಧುಮೇಹ ದಿನಾಚರಣೆ 2021″ಇದರ ಅಂಗವಾಗಿ ನಡೆದ ಉಚಿತ ಮಧುಮೇಹ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ  ಇಸ್ರೋದ ನಿವೃತ್ತ ವಿಜ್ಞಾನಿ ಇ. ಜನಾರ್ಧನ್ ಅಧಿಕ ಮಧುಮೇಹಿಗಳಿರುವ ನಮ್ಮ ದೇಶದಲ್ಲಿ ಮಧುಮೇಹಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಅರಿತು ಸೂಕ್ತ ಔಷಧಿಗಳನ್ನು ನೀಡುವ ವ್ಯವಸ್ಥೆಯಾಗಬೇಕು ಎಂದರು.

ಮುಖ್ಯಅತಿಥಿ ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಡಾ. ಅನಂತ ಕಾಮತ್ ಮಾತನಾಡುತ್ತಾ ಭಾರತವು ಮಧುಮೇಹದ ರಾಜಧಾನಿಯಾಗಿದೆ.  ಮಧುಮೇಹ ರೋಗಿಗಳು ಮಿತವಾದ ಮತ್ತು ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದರು.

ಶ್ರೀ ಭುವನೇಂದ್ರ ವೈದ್ಯಕೀಯ ಮಿಷನ್ ಇದರ ಅಧ್ಯಕ್ಷ ಗಣೇಶ್ ಕಾಮತ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ಸ್ಪೆಷಲಿಸ್ಟ್ ವೈದ್ಯಕೀಯ ಶಿಬಿರದಲ್ಲಿ 60ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು ಎಲ್ಲರಿಗೂ Blood sugar, Glyco Hb%,  BP, ECG, ಹಾಗೂ Serum Uric acid ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.

ಶಿವಕುಮಾರ್ ಪ್ರಾರ್ಥಿಸಿದರು. ಶೇಖರ್ ಎಚ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಸಂತ್ ಎಂ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು