ಇತ್ತೀಚಿನ ಸುದ್ದಿ
ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ
25/12/2025, 15:52
ಬೆಂಗಳೂರು(reporterkarnataka.com): ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ “ಭಾರತ ರತ್ನ ವಾಜಪೇಯಿ ಗ್ರಂಥಾಲಯ”ವನ್ನು ಮಲ್ಲೇಶ್ವರದ ಭಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಉದ್ಘಾಟಿಸಿದರು.






ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.












