2:01 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು

18/08/2021, 19:32

ಲಖನೌ(ReporteRkarnataka.com)

ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್‌ ರಹಮಾನ್‌ ಬರ್ಕ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಸಂಭಲ್‌ ಲೋಕಸಭಾ ಕ್ಷೇತ್ರದ ಸಂಸದ ಶಫಿಕುರ್‌, ‘ಭಾರತವು ಬ್ರಿಟಿಷ್‌ ಆಡಳಿತಕ್ಕೆ ಒಳಪಟ್ಟಿದ್ದಾಗ, ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿತ್ತು.
ಅವರೂ ಸಹ ಸ್ವತಂತ್ರರಾಗಲು ಇಚ್ಛಿಸಿದ್ದಾರೆ. ಇದು ಅವರ ಖಾಸಗಿ ವಿಚಾರವಾಗಿದೆ. ಇದರಲ್ಲಿ ನಾವು ಹೇಗೆ ಮೂಗು ತೂರಿಸಲು ಸಾಧ್ಯ?’ ಎಂದಿದ್ದಾರೆ.

‘ಅಫ್ಗನ್ನರು ಅವರ ರಾಷ್ಟ್ರವನ್ನು ಅವರದೇ ರೀತಿಯಲ್ಲಿ ಮುನ್ನಡೆಸಲು ಬಯಸಿದ್ದಾರೆ. ತಾಲಿಬಾನಿಗಳು ಅವರ ರಾಷ್ಟ್ರವನ್ನು ಸ್ವತಂತ್ರಗೊಳಿಸಲು ಮುಂದಾಗಿದ್ದಾರೆ ಹಾಗೂ ಇದು ಅಫ್ಗಾನಿಸ್ತಾನದ ಆಂತರಿಕ ವಿಚಾರವಾಗಿದೆ’ ಎಂದು ಶಫಿಕುರ್‌ ಹೇಳಿದ್ದರು.

ಸಂಸದ ಶಫಿಕುರ್‌ ಅವರು ತಾಲಿಬಾನಿಗಳನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಹೋಲಿಕೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ‘ಶಫಿಕುರ್‌ ಅವರ ವಿರುದ್ಧ ದೇಶ ದ್ರೋಹ (124ಎ), 154ಎ, 295 ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಫೇಸ್‌ಬುಕ್‌ ವಿಡಿಯೊದಲ್ಲೂ ಇಂಥದ್ದೇ ಹೇಳಿಕೆಗಳನ್ನು ನೀಡಿರುವ ಇಬ್ಬರು ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ’ ಎಂದು ಸಂಭಲ್‌ನ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು