9:24 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶ:  ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿಗೆ ಭಾರಿ ಸ್ವಾಗತ

01/10/2022, 01:01

ಚಾಮರಾಜನಗರ(reporterkarnataka.com): ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಶುಕ್ರವಾರ ಮುಂಜಾನೆ ಕರ್ನಾಟಕವನ್ನು ಪ್ರವೇಶಿಸಿತು. ಹುಲಿ ಸಂರಕ್ಷಿತ ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ತಮಿಳುನಾಡಿನ ಗುಡಲೂರಿನಿಂದ ಕರ್ನಾಟಕದ ಗುಂಡ್ಲುಪೇಟೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಹನದಲ್ಲಿ ಬಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಹುಲ್​ ಗಾಂಧಿ ಅವರಿಗೆ ಸ್ವಾಗತಿಸಲಾಯಿತು.

ಕಾಂಗ್ರೆಸ್ ನಾಯಕರಿಗೆ ಅರಣ್ಯ ಇಲಾಖೆಯು ಕಾರಿನಲ್ಲಿ ತೆರಳಲು ಅವಕಾಶ ನೀಡಿತ್ತು. ರಾಹುಲ್​ ಗಾಂಧಿ ಮತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಗುಂಡ್ಲುಪೇಟೆಗೆ ಬಂದರು.

ರಾಹುಲ್ ಗಾಂಧಿ ಅವರನ್ನು ಕೆಕ್ಕೆನಹಳ್ಳಿಯ ಕರ್ನಾಟಕ ಗಡಿಯಲ್ಲೇ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಸ್ವಾಗತಿಸಿದರು. ಈ ವೇಳೆ ಮಹದೇವಪ್ಪ, ಜಾರ್ಜ್, ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು. ಮತ್ತೊಂದೆಡೆ ರಾಹುಲ್ ಗಾಂಧಿ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೇದಿಕೆಯ ಬಳಿಯೇ ಕಾಯುತ್ತಿದ್ದರು. ಗುಂಡ್ಲುಪೇಟೆಯಿಂದ ಕೆಕ್ಕೇನಹಳ್ಳಿ ಸುಮಾರು 25 ಕಿಮೀ ದೂರವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು