ಇತ್ತೀಚಿನ ಸುದ್ದಿ
ಭಾರತದ ಅಳಿಯ ಬ್ರಿಟನ್ ನ ಪ್ರಧಾನಿ: ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ಪಿಎಂ ಆಗಿ ಆಯ್ಕೆ
24/10/2022, 21:11
ಲಂಡನ್ (reporterkarnataka.com): ಬ್ರಿಟನ್ ನ ಮುಂದಿನ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆಗೊಂಡಿದ್ದಾರೆ.
ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಅವರ ಅಳಿಯನಾದ ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗಿ ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.
ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರು ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳಲ್ಲೇ ರಾಜೀನಾಮೆ ನೀಡಿದ್ದರಿಂದ, ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ನೂತನ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ರಿಷಿ ಸುನಕ್ ಜತೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸಲು ನಿಂತಿದ್ದ ಪೆನ್ನಿ ಮೊರ್ಡೌಂಟ್ ಸಂಸದರ ಬೆಂಬಲದ ಬಹುಮತ ಸಿಗದೆ, ರೇಸ್ನಿಂದ ಹೊರ ಬಿದ್ದಿದ್ದಾರೆ. ಹೀಗಾಗಿ ರಿಷಿ ಸುನಕ್ 100ಕ್ಕೂ ಹೆಚ್ಚು ಸಂಸದರ ಬೆಂಬಲದೊಂದಿಗೆ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.