2:03 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬಾವಾ ಪರ ಸ್ವತಃ ದೇವೇಗೌಡರೇ ಫೀಲ್ಡಿಗೆ: ಇಂದು ಮಧ್ಯಾಹ್ನ ಮಾಜಿ ಪ್ರಧಾನಿ ಸುರತ್ಕಲ್ ಗೆ; ಜೆಡಿಎಸ್ ಪರ ಪ್ರಚಾರ

01/05/2023, 10:13

ಮಂಗಳೂರು(reporterkarnataka.com): ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾ ದಳ ತೀರಾ ಬಡಕಲು ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಪ್ರಚಾರಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ. ದೇವೇಗೌಡ ಫೀಲ್ಡಿಗಿಳಿಯಲಿದ್ದಾರೆ.
ಮೊಯ್ದೀನ್ ಬಾವಾ ಅವರ ಸಹೋದರ,
ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರು ದೇವೇಗೌಡ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಅನಾರೋಗ್ಯದ ನಡುವೆಯೂ ಉತ್ತರ ಕ್ಷೇತ್ರ ಸಂಚಾರಕ್ಕೆ ದೇವೇಗೌಡ ಅವರು ಒಪ್ಪಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಜೆಡಿಎಸ್ ಗೆ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಇಲ್ಲದ ಕಾರಣ ಬಾವಾ ಪರ ಮತ ಕ್ರೋಢೀಕರಿಸಲು ದೇವೇಗೌಡ ಅವರೇ ಪ್ರಚಾರ ನಡೆಸಲಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಅವರು ಮೇ 1(ಇಂದು) ಮಧ್ಯಾಹ್ನ 2.00 ಗಂಟೆಗೆ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಆಗಮಿಸುವರು. 2.30 ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ತಂಗುವರು. 3.30ಕ್ಕೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು.
4,00 ಗಂಟೆಗೆ ಬಲವಂಡಿ ದೈವಸ್ಥಾನ, 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡುವರು.
5.00 ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 7.00 ನಿರ್ಗಮಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು