1:31 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾದ ಮಂಜೇಶ್ವರದ ಸ್ನೇಹಾಲಯ: 6 ವರ್ಷಗಳ ಬಳಿಕ ಕುಟುಂಬಸ್ಥರ ಸೇರಿದ ಬಿಹಾರದ ಮಂಟು

29/07/2024, 20:53

ಮಂಗಳೂರು(reporterkarnataka.com):ಮಂಜೇಶ್ವರದ ಸ್ನೇಹಾಲಯವು ಭಾವನಾತ್ಮಕ ಪುನರ್ಮಿಲನಕ್ಕೆ ಸಾಕ್ಷಿಯಾಯಿತು. 6 ವರ್ಷದ ಹಿಂದೆ ಕಾಣೆಯಾಗಿದ್ದ ಮಂಟು ಸಿಂಗ್ ಪುನಃ ಕುಟುಂಬಸ್ಥ ಮಡಿಲು ಸೇರಿದ ಘಟನೆ ಸ್ನೇಹಾಲಯದಲ್ಲಿ ನಡೆಯಿತು.


2020 ಅಕ್ಟೋಬರ್ 26ರಂದು ಫರಂಗಿಪೇಟೆ ಬಳಿಯ ಬಸ್ಸು ನಿಲ್ದಾಣದಲ್ಲಿ ತುಂಬಾ ದಿನಗಳಿಂದ ಮಲಗಿದ್ದ ಆತನನ್ನು, ಸ್ಥಳೀಯ ರಿಕ್ಷಾ ಚಾಲಕರು ನೀಡಿದ ಮಾಹಿತಿಯ ಮೇರೆಗೆ ಸ್ನೇಹಾಲಯದ ಸಂಸ್ಥಾಪಕರಾದ ಸಹೋದರ ಜೋಸೆಫ್ ಕ್ರಾಸ್ತಾ ಅವರು ರಕ್ಷಿಸಿ ಸ್ನೇಹಾಲಯಕ್ಕೆ ದಾಖಲಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಆತ ಸ್ನೇಹಾಲಯದಲ್ಲಿ ಎಲ್ಲರ ಪ್ರೀತಿಪಾತ್ರನಾಗಿದ್ದ,ಆತ ಕಿವುಡ ಮತ್ತು ಮೂಖನಾಗಿದ್ದ ಕಾರಣ ಆತನ ಹೆಸರು ಮತ್ತು ವಿಳಾಸವನ್ನು ಪತ್ತೆ ಹಚ್ಚವುದು ಸ್ನೇಹಾಲಯ ತಂಡಕ್ಕೆ ಒಂದು ದೊಡ್ಡ ಸವಾಲಾಗಿತ್ತು. ಸ್ನೇಹಾಲಯದಲ್ಲಿ ಆತನಿಗೆ ರಮೇಶ್ ಎಂಬ ಹೆಸರನ್ನು ಇಡಲಾಯಿತು, ಸಂಕೇತ ಭಾಷಾ ವ್ಯಾಖ್ಯಾನಕಾರರುನ್ನು ತಂದು ವಿಳಾಸ ಪತ್ತೆಹಚ್ಚುವ ಪ್ರಯತ್ನ ಮಾಡಲಾಗಿತ್ತು ಆದರೂ ಯಾವುದೆ ಫಲ ಸಿಗಲಿಲ್ಲ. ಇನ್ನೊಂದೆಡೆ ಆತನ ಕುಟುಂಬದವರು ಆತನನ್ನು ಹುಡುಕಾಡಿ ಬೇಸತ್ತು ಆತ ಮೃತಪಟ್ಟಿರಬಹುದೆಂದು ಊಹಿಸಿದ್ದರು.
ಸ್ನೇಹಾಲಯ ಮತ್ತು ಮಂಗಳೂರಿನ ಆಧಾರ್ ಸೇವಾ ಕೇಂದ್ರದ ಜಂಟಿ ಸಹಯೋಗದಲ್ಲಿ ಸ್ನೇಹಾಲಯದ ನಿವಾಸಿಗಳಿಗೆ ಆಧಾರ್ ಶಿಬಿರವನ್ನು ಏರ್ಪಡಿಸಲಾಗಿತ್ತು, ಮತ್ತು ಇದರ ಫಲವಾಗಿ ಸುಮಾರು 36 ನಿವಾಸಿಗಳ ವಿಳಾಸವನ್ನು ಪತ್ತೆಹಚ್ಚಲು ಸಾಧ್ಯವಾಯಿತು. ಅಧಾರ್ ಕಾರ್ಡಿನಲ್ಲಿ ಇದ್ದ ರಮೇಶನ ವಿಳಾಸ ಸಿಕ್ಕಿದ ತಕ್ಷಣ ಸ್ನೇಹಾಲಯದ ಸಮಾಜ ಕಾರ್ಯ ವಿಭಾಗದ ಸಿಬ್ಬಂದಿಗಳು ಆತನ ಗ್ರಾಮದ ಮುಖ್ಯಸ್ಥರನ್ನು ಸಂಪರ್ಕಿಸಿತು, ‘ಸರಪಂಚ್’ಆತನ ಸಂಬಂಧಿಕನಾದ ಕಾರಣ ತಕ್ಷಣ ವಿಡಿಯೂ ಕಾಲ್ ಮಾಡಿ ಆತನ ಗುರುತನ್ನು ಧ್ರಡಪಡಿಸಿದನು ಮಾತ್ತು ಅದಷ್ಟು ಬೇಗ ಸ್ನೇಹಾಲಯಕ್ಕೆ ಬರುವ ಭರವಸೆಯನ್ನು ಕೊಟ್ಟರು. ಅದರಂತೆ ಇಂದು( ಜುಲೈ 29) ಆತನ ಸೋದರ ಸಂಬಂಧಿಗಳಾದ ಮನೀಶ್ ಕುಮಾರ್ ಸಿಂಗ್ ಮತ್ತು ಪಂಕಜ್ ಸಿಂಗ್ ದೂರದ ಬಿಹಾರದಿಂದ ಮಂಜೇಶ್ವರದ ಸ್ನೇಹಾಲಯಕ್ಕೆ ಆಗಮಿಸಿದರು. ಸಹೋದರ ಜೋಸೆಫ್ ಕ್ರಾಸ್ತಾ ಮತ್ತು ಸ್ನೇಹಾಲಯ ಸಿಬ್ಬಂದಿಗಳ ಸಮ್ಮುಖದಲ್ಲಿ ಪುನರ್ಮಿಲನ ಕಾರ್ಯ ನಡೆಯಿತು. ಆತನ ಕುಟುಂಬದವರ ಪ್ರಕಾರ ಆತನ ನಿಜ ಹೆಸರು ಮಂಟು ಸಿಂಗ್, ಆತ ಕಳೆದ 6 ವರ್ಷಗಳಿಂದ ನಾಪತ್ತೆಯಾಗಿದ್ದ, ತನ್ನ ಊರಾದ ಬಿಹಾರದ ಸಿಮಾರಿಯಾದಲ್ಲಿ ಕೃಷಿ ಮಾಡಿ ಮತ್ತು ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಆತ ಗಾಂಜಾ ಸೇವನೆಯ ಪರಿಣಾಮವಾಗಿ ಮಾನಸಿಕ ಅಸ್ವಸ್ಥತೆಗೆ ತುತ್ತಾಗಿದ್ದ. ಹೀಗೆ ಒಂದು ದಿನ ಹೇಳದೆ ಮನೆಯಿಂದ ನಾಪತ್ತೆಯಾಗಿದ್ದ.
ಈ ಕಾರ್ಯಕ್ಕೆ ಸಹಕರಿದ ಸ್ನೇಹಾಲಯ ಸಂಸ್ಥೆಗೆ ಕುಟುಂಬಿಕರು ತುಂಬು ಹೃದಯ ಕೃತಜ್ನತೆಗಳನ್ನು ಸಲ್ಲಿಸಿದರು ಅಂತೆಯೆ ಮುಂಬರುವ ದಿನಗಳಲ್ಲಿ ಆತನ ಆರೈಕೆ ಮತ್ತು ಚಿಕಿತ್ಸೆಯನ್ನು ಸರಿಯಾಗಿ ಮಾಡುವ ಭರವಸೆಯನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು