8:45 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಭವಾನಿಪುರ ಉಪ ಚುನಾವಣೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಭರ್ಜರಿ ಗೆಲುವು

03/10/2021, 16:22

ಕೊಲ್ಕತ್ತಾ(reporterkarnataka.com) : ಪಶ್ವಿಮ ಬಂಗಾಲದ ಭವಾನಿಪುರ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಪ್ರತಿಸ್ಪರ್ಧಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು 58,000 ಮತಗಳಿಂದ ಸೋಲಿಸಿದ್ದಾರೆ. ಇದೊಂದು ದಾಖಲೆಯ ಗೆಲುವು ಆಗಿದೆ.

ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದರೆ, ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ 26,320 ಮತಗಳನ್ನು ಪಡೆದಿದ್ದಾರೆ. ಸಿಎಂಪಿ ಅಭ್ಯರ್ಥಿ ಶ್ರೀಜಿಬ್ ಬಿಸ್ವಾಸ್ 4,201 ಮತಗಳನ್ನು ಗಳಿಸಿದ್ದಾರೆ.

ಕಳೆದ ಮೇನಲ್ಲಿ ನಡೆದಿದ್ದ ಬಂಗಾಳ ಸಾರ್ವತ್ರಿಕ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸೋಲು ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ 6 ತಿಂಗಳ ಒಳಗೆ ಅವರು ಶಾಸಕರಾಗಿ ಆಯ್ಕೆಯಾಗುವುದು ಸಾಂವಿಧಾನಿಕವಾಗಿ ಅನಿವಾರ್ಯಾಗಿತ್ತು. ಹಾಗಾಗಿ ಭವಾನಿಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದ

ಶೋಭಂದೇಬ್ ಚಟ್ಟೋಪಾಧ್ಯಾಯ ಅವರು ಮಮತಾ ಬ್ಯಾನರ್ಜಿಗೆ ಅವರು ಶಾಸಕರಾಗುವ ಸಲುವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ

ನೀಡಿದ್ದರು. ಇಲ್ಲಿ ಉಪ ಚುನಾವಣೆ ನಡೆದು ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು