ಇತ್ತೀಚಿನ ಸುದ್ದಿ
ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಇಬ್ಬರು ರೈತರು ಸೇರಿ 4 ಮಂದಿ ದಾರುಣ ಸಾವು
05/12/2021, 18:21

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.
ಈರುಳ್ಳಿ ಸಾಗಿಸುತ್ತಿದ್ದ ಐಷರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ರೈತರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ದೊಡ್ಡಸಿದ್ದವ್ವನಹಳ್ಳಿ ರಾಷ್ಟ್ರೀಯ ಹೆದ್ದಾರಿ- ೪ರಲ್ಲಿ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ತಾಲೂಕಿನ ಮಂಜುನಾಥ, ವಿಜಯಪುರದ ಲಾರಿ ಕ್ಲೀನರ್ ಸಂಜಯ್, ರೋಣದ ಚಾಲಕ ಶರಣಪ್ಪ ಮೃತರು ಎಂದು ಗುರುತಿಸಲಾಗಿದೆ. ಗಾಯಗೊಂಡ ಗ್ಯಾಸ್ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್‌ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.