3:49 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಮನೋಜ್‌ ಪಾಂಡೆ ನೇಮಕ

18/04/2022, 23:53

ಹೊಸದಿಲ್ಲಿ(reporterkarnataka.com): ಭಾರತದ ನೂತನ ಸೇನಾ ಮುಖ್ಯಸ್ಥರನ್ನಾಗಿ 
ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. 

ಪಾಂಡೆ ಅವರು ಇದುವರೆಗೆ ಸೇನಾ ಸಿಬ್ಬಂದಿಯ ಉಪಾಧ್ಯಕ್ಷ ಸ್ಥಾನವನ್ನು ನಿರ್ವಹಿಸುತ್ತಿದ್ದರು.

ಅದಕ್ಕೂ ಮೊದಲು ಪಾಂಡೆ ಅವರು ಪೂರ್ವ ಸೇನಾ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ. 31 ಡಿಸೆಂಬರ್ 2021 ರಂದು ಸೇನಾ ಮುಖ್ಯಸ್ಥರಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಜನರಲ್‌ ಮನೋಜ್‌ ಮುಕುಂದ್ ನರವಾಣೆ ಅವರು ಏಪ್ರಿಲ್ 2022ರಲ್ಲಿ ನಿವೃತ್ತರಾಗಲಿದ್ದಾರೆ.

ಇಂಜಿನಿಯರ್ ಆಗಿರುವ ಲೆಫ್ಟಿನೆಂಟ್ ಜನರಲ್ ಪಾಂಡೆ ಅವರು ಜನರಲ್ ನರವಾಣೆ ನಂತರ ಸೇನೆಯಲ್ಲಿ ಅತ್ಯಂತ ಹಿರಿಯರಾಗಿರುವ ಅಧಿಕಾರಿಯಾಗಿದ್ದು, ಆಡಳಿತವನ್ನು ವಹಿಸಿಕೊಳ್ಳಲಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಕೆಲವು ಉನ್ನತ ಅಧಿಕಾರಿಗಳು ನಿವೃತ್ತರಾಗಿದ್ದು ಪಾಂಡೆಯವರು ಈಗ ಹಿರಿತನವನ್ನು ಹೊಂದಿದ್ದಾರೆ.

ಸೇನೆಯ ತರಬೇತಿ ಕಮಾಂಡರ್ ಆಗಿದ್ದ ಲೆಫ್ಟಿನೆಂಟ್ ಜನರಲ್ ರಾಜ್ ಶುಕ್ಲಾ ಅವರು ಮಾರ್ಚ್ 31ರಂದು ನಿವೃತ್ತರಾಗಿದ್ದರು. ಕೆಲವು ಹಿರಿಯ ನಾಯಕರು ಜನವರಿ ಅಂತ್ಯದ ವೇಳೆಗೆ ರಿಟೈರ್‌ ಆಗಿದ್ದಾರೆ. ಲೆಫ್ಟಿನೆಂಟ್ ಜನರಲ್ ಸಿ.ಪಿ. ಮೊಹಂತಿ ಮತ್ತು ಲೆಫ್ಟಿನೆಂಟ್ ಜನರಲ್ ವೈ.ಕೆ. ಜೋಶಿ ಅವರು ಜನವರಿ 31ರಂದು ನಿವೃತ್ತರಾಗಿದ್ದಾರೆ.

ಪಾಂಡೆ ಅವರು ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ನಿಂದ ಸೇನಾ ಮುಖ್ಯಸ್ಥರಾಗುವ ಮೊದಲ ಅಧಿಕಾರಿಯಾಗಲಿದ್ದಾರೆ. ಈ ಹುದ್ದೆಯನ್ನು ಇದುವರೆಗೆ ಪದಾತಿ ದಳ, ಶಸ್ತ್ರಸಜ್ಜಿತ ಮತ್ತು ಆರ್ಟಿಲರಿ ಅಧಿಕಾರಿಗಳು ವಹಿಸಿಕೊಳ್ಳುತ್ತಿದ್ದರು ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು