1:57 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು

05/09/2021, 00:41

ವಿಜಯಪುರ (Reporterkarnataka.com)

ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ.

ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡುಗುತ್ತಿದ್ದಾರೆ. ಆದರೆ ಅಧಿಕಾರಿಗಳು ಇದು ಕೇವಲ ಶಬ್ದ ಕಂಪನವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಭಯ ಬೇಡ ಭೂಕಂಪನ ಅಲ್ಲ :
ಜಿಲ್ಲೆಯ ಕೆಲ ಭಾಗಗಳಲ್ಲಿ ಹಲವು ವರ್ಷಗಳಿಂದ ಭೂಕಂಪನದ ಸದ್ದು ಕೇಳಿ ಬರುತ್ತಿದೆ. ಈ ಮೊದಲು ತಿಕೋಟಾ, ಸೋಮದೇವರ ಹಟ್ಟಿ, ಕನಮಡಿ, ಬಾಬಾನಗರ ಭಾಗದಲ್ಲಿ ಭೂಕಂಪನದ ಅನುಭವವಾಗುತ್ತಿದೆ ಎಂದು ಇಲ್ಲಿನ ಗ್ರಾಮಸ್ಥರು ತೀವ್ರ ಭೀತಿಗೊಳ್ಳುತ್ತಿದ್ದರು. ಹೀಗೆ ಈ ಸಮಸ್ಯೆ ಪದೇ ಪದ ಕೇಳಿ ಬರುತ್ತಿದ್ದರಿಂದ ಕಳೆದ ವರ್ಷ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಭೂಕಂಪನದ ಪರಿಶೀಲನೆಗಾಗಿ ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನಿಗಳ ತಜ್ಞರಿಗೆ ಪತ್ರ ಬರೆದು ತೋರಿದ್ದರು. ಇದಾದ ಬಳಿಕ ಬೆಂಗಳೂರಿನ ಭೂ ವಿಜ್ಞಾನ ಅ ಕಾರಿಗಳು ತಿಕೋಟಾ ಭಾಗದ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸುವ ಸಾಧ್ಯತೆ ತೀರ ಕಡಿಮೆಯಿದೆ. ಜನರು ಆತಂಕ ಐಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಭೂಮಿಯಡಿಯಿಂದ ಕಳಿ ಬರುತ್ತಿರುವ ಭಯಂಕರ ಶಬ್ದ ಭೂಮಿಯೊಳಗಿನ ನೀರಿನ ಚಲನೆಯಿಂದ ಉಂಟಾಗುತ್ತಿದೆ. ಮಳೆಯಾದರೆ ಹೆಚ್ಚು ಭೂಮಿಯೊಳಗೆ ನೀರು ಇಂಗುವ ವೇಳೆ ಭೂ ಗರ್ಭದಲ್ಲಿ ನೈಸರ್ಗಿಕ ಕ್ರಿಯೆಯಿಂದ ಹೀಗೆ ಆಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ ಎನ್ನಲಾಗಿದೆ
.

ಇತ್ತೀಚಿನ ಸುದ್ದಿ

ಜಾಹೀರಾತು