5:07 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಭೂಪಾಲ್ ಅನಿಲ ದುರಂತ ಸ್ಮರಣಾರ್ಥ: ಎಂಆರ್ ಪಿಎಲ್ ನಿಂದ ಅಣುಕು ಪ್ರದರ್ಶನ

05/12/2021, 15:55

ಮಂಗಳೂರು (reporterkarnataka.com): ರಾಸಾಯನಿಕ ವಿಪತ್ತು ದುರಂತ ನಿರ್ವಹಣಾ ತಡೆಗಟ್ಟುವ ದಿನದ ಅಂಗವಾಗಿ ಬೆಂಕಿ ದುರಂತ ಸಂಭವಿಸಿದ ಸಂದರ್ಭದಲ್ಲಿ ಅದರ ನಿರ್ವಹಣೆಯ ಅಣುಕು ಪ್ರದರ್ಶನವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‍ನ ಹೈಡ್ರೋ ಕ್ರ್ಯಾಕರ್ 2ನೇ ಘಟಕದಲ್ಲಿ ಶನಿವಾರ ಹಮ್ಮಿಕೊಳ್ಳಲಾಯಿತು.

ಸುಮಾರು 45 ನಿಮಿಷಗಳ ಕಾಲ ಮಾಕ್ ಡ್ರಿಲ್ ಅಗ್ನಿಶಾಮಕ ಮತ್ತು ತಂಪಾಗಿಸುವ ಕಾರ್ಯಾಚರಣೆ ನಡೆಯಿತು. ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂ.ಆರ್.ಪಿ.ಎಲ್.)ನ ಅತ್ಯಾಧುನಿಕ ಉಪಕರಣ ಹಾಗೂ ಸಲಕರಣೆಗಳ ಉಪಯೋಗವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.

ಅಣುಕು ಪ್ರದರ್ಶನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸದಸ್ಯರು ಅಣುಕು ಪ್ರದರ್ಶನವನ್ನು ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ  ಅಧಿಕಾರಿ ವಿಜಯ್ ಕುಮಾರ್ ಪೂಜಾರ್, ಜಿಲ್ಲಾ ಬಿಕ್ಕಟ್ಟು ನಿರ್ವಹಣಾ ಪ್ರಾಧಿಕಾರದ ಹಾಗೂ ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ ಸಿ. ಮಿಶ್ರಿಕೋಟಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಭೂಪಾಲ್ ಅನಿಲ ದುರಂತದ ಸ್ಮರಣಾರ್ಥ ಈ ಅಣುಕು ಪ್ರದರ್ಶನವನ್ನು ಆಯೋಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು