ಇತ್ತೀಚಿನ ಸುದ್ದಿ
ಭೂ ಕುಸಿತ ಅನಾಹುತ: ಎಚ್ಚರ ವಹಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ
21/05/2022, 19:43
ಮಡಿಕೇರಿ (reporterkarnataka.com): ಮುಂಗಾರು ಸಂದರ್ಭದಲ್ಲಿ ಭೂಕುಸಿತ ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರಿಸುವುದು ಹಾಗೂ ಈ ಹಿಂದೆ ಪ್ರಾಕೃತಿಕ ವಿಕೋಪದಿಂದಾಗಿರುವ ಅನಾಹುತಗಳು ಮರು ಕಳುಹಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು
ನಿರ್ದೇಶನ ನೀಡಿದರು.
ಅವರು ಮಳೆಹಾನಿಗೆ ಸಂಬಂಧಿಸಿಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಶನಿವಾರ ಪರಿಶೀಲನಾ ಸಭೆ ನಡೆಸಿದರು.
ಮುಂಗಾರು ಸಂದರ್ಭದಲ್ಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದರು. ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ಪಿಡಬ್ಲ್ಯುಡಿ ಇಇ ನಾಗರಾಜು, ಭೂ ದಾಖಲೆಗಳ ಉಪನಿರ್ದೇಶಕರಾದ ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಸಪ್ಪ, ಪ್ರಕೃತಿ ವಿಕೋಪದ ಸಂಯೋಜಕರಾದ ಅನನ್ಯ ವಾಸುದೇವ್ ಇತರರು ಇದ್ದರು.