4:06 AM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಭೂ ಕುಸಿತ ಅನಾಹುತ: ಎಚ್ಚರ ವಹಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ

21/05/2022, 19:43

ಮಡಿಕೇರಿ (reporterkarnataka.com):  ಮುಂಗಾರು ಸಂದರ್ಭದಲ್ಲಿ ಭೂಕುಸಿತ ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರಿಸುವುದು ಹಾಗೂ ಈ ಹಿಂದೆ ಪ್ರಾಕೃತಿಕ ವಿಕೋಪದಿಂದಾಗಿರುವ ಅನಾಹುತಗಳು ಮರು ಕಳುಹಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು
ನಿರ್ದೇಶನ ನೀಡಿದರು.

ಅವರು ಮಳೆಹಾನಿಗೆ ಸಂಬಂಧಿಸಿಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಶನಿವಾರ ಪರಿಶೀಲನಾ ಸಭೆ ನಡೆಸಿದರು. 

ಮುಂಗಾರು ಸಂದರ್ಭದಲ್ಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದರು.  ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ಪಿಡಬ್ಲ್ಯುಡಿ ಇಇ ನಾಗರಾಜು, ಭೂ ದಾಖಲೆಗಳ ಉಪನಿರ್ದೇಶಕರಾದ ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಸಪ್ಪ, ಪ್ರಕೃತಿ ವಿಕೋಪದ ಸಂಯೋಜಕರಾದ ಅನನ್ಯ ವಾಸುದೇವ್ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು