ಇತ್ತೀಚಿನ ಸುದ್ದಿ
ಭೂಕುಸಿತ: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ; ಪೊಲೀಸರ ನಿಯೋಜನೆ
27/07/2023, 17:18
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಲೆನಾಡಿನಲ್ಲಿ ನಿರಂತರ ಮಳೆಗೆ ಭೂ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಅತ್ಯಂತ ಎತ್ತರವಾದ ಬೆಟ್ಟವಾದ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಮುಳ್ಳಯ್ಯನಗಿರಿ ರಸ್ತೆಯಲ್ಲಿ 5 ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ. ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಮುಳ್ಳಯ್ಯನಗಿರಿ ರಸ್ತೆಯಲ್ಲಿ ಎರಡು ಬ್ಯಾರಿಕೇಟ್ ಗಳನ್ನು ಹಾಕಿ ಪ್ರವಾಸಿಗರಿಗೆ ನಿರ್ಬಂಧ ಹಾಕಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ಜಿಲ್ಲಾಡಳಿತ ನಿಯೋಜನೆ ಮಾಡಿದೆ.
ಜಿಲ್ಲಾಡಳಿತದಿಂದ ಗಿರಿ ಪ್ರದೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ನಿರ್ಬಂಧ ಹಾಕಲಾಗಿದೆ. ಮಳೆಯ ನಡುವೆ ಪ್ರಕೃತಿ ಸೌಂದರ್ಯವನ್ನು ಸವಿಯಲು ಬಂದ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ.