4:11 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಭೂಮಾಫಿಯಾಗೆ ಕಂದಾಯ ಸಚಿವ ಆರ್‌. ಅಶೋಕ್‌ ರಕ್ಷಣೆ:  ಆಮ್‌ ಆದ್ಮಿ ಪಾರ್ಟಿ ಆರೋಪ

30/03/2022, 12:08

ಬೆಂಗಳೂರು(reporterkarnataka.com): ಬೆಂಗಳೂರಿನ ಭೂಮಾಫಿಯಾಗೆ ಕಂದಾಯ ಸಚಿವ ಆರ್‌.ಅಶೋಕ್‌ ಬೆನ್ನೆಲುಬಾಗಿದ್ದು, ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅವರು ರಕ್ಷಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಬೆಂಗಳೂರು ವಕೀಲರ ಘಟಕದ ಅಧ್ಯಕ್ಷ ಮಂಜುನಾಥ್‌ ಸ್ವಾಮಿ, “ಬೆಂಗಳೂರು ದಕ್ಷಿಣದ ಉಪವಿಭಾಗಾಧಿಕಾರಿ ಎಂ.ಜಿ.ಶಿವಣ್ಣ ಹಾಗೂ ತಹಸೀಲ್ದಾರ್‌ ಶಿವಪ್ಪ ಲಮಾಣಿಯವರು ಮುನಿರಾಜು ಹಾಗೂ ಇತರೆ ಭೂಗಳ್ಳರ ಜೊತೆಗೂಡಿ ಅಕ್ರಮ ಎಸಗಿದ್ದಾರೆ. ಕಾನೂನುಬಾಹಿರವಾಗಿ ಮನೆ ಹಾಗೂ ಮಳಿಗೆಗಳನ್ನು ಕಡೆವಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡತೋಗುರು ಗ್ರಾಮದ ಸರ್ವೇ ನಂಬರ್‌ 152/1ರಲ್ಲಿ ಈ ಘಟನೆ ನಡೆದಿದೆ. ಪ್ರಕರಣದ ಸಂತ್ರಸ್ತರು ಹೈಕೋರ್ಟ್‌ ಮೆಟ್ಟಿಲೇರಿದಾಗ,  ಇಬ್ಬರು ಅಧಿಕಾರಿಗಳು ಅಕ್ರಮ ಎಸಗಿರುವುದು ಸಾಬೀತಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ಆದೇಶ ನೀಡಿದೆ. ಆದರೆ ಕಂದಾಯ ಸಚಿವ ಆರ್‌.ಅಶೋಕ್‌ರವರ ಪ್ರಭಾವದಿಂದಾಗಿ ತಪ್ಪಿತಸ್ಥ ಅಧಿಕಾರಿಗಳಿಗೆ ಯಾವುದೇ ಶಿಕ್ಷೆಯಾಗಿಲ್ಲ” ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಮಾತನಾಡಿ, “ಆರ್‌.ಅಶೋಕ್‌ರವರು ಸಚಿವರಾದಾಗಿನಿಂದ ಬೆಂಗಳೂರಿನಲ್ಲಿ ಭೂಮಾಫಿಯಾ ಹಾವಳಿ ಜಾಸ್ತಿಯಾಗುತ್ತಿದೆ. ಅಕ್ರಮವಾಗಿ ಜಮೀನನ್ನು ವಶಪಡಿಸಿಕೊಳ್ಳುವುದು, ಬೆದರಿಕೆ ಒಡ್ಡಿ ಒಕ್ಕಲೆಬ್ಬಿಸುವುದು ಮುಂತಾದ ಅಕ್ರಮಗಳು ಎಗ್ಗಿಲ್ಲದೇ ಸಾಗುತ್ತಿವೆ. ಕಂದಾಯ ಇಲಾಖೆಯ ಅಧಿಕಾರಿಗಳೇ ಭೂಮಾಫಿಯಾಗೆ ಸಹಕಾರ ನೀಡುತ್ತಿದ್ದಾರೆ. ಇದರಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಸಾಮಾನ್ಯ ಜನರು ಆತಂಕದಲ್ಲಿ ಬದುಕುವಂತಾಗಿದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಕೀಲರಾದ ಕಾರ್ತಿಕೇಯ, ಗುರುಪ್ರಸಾದ್‌, ಸೆಂತಿಲ್‌ ಕುಮಾರ್‌, ತೇಜಸ್ವಿನಿ, ವರ್ಷಿಕಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು