ಇತ್ತೀಚಿನ ಸುದ್ದಿ
ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಪಾಲಿಕೆ ವಿಫಲ: ಆಯುಕ್ತರ ಕಚೇರಿ ಜಪ್ತಿಗೆ ಕೋರ್ಟ್ ಆದೇಶ
12/10/2022, 23:40
ಮಂಗಳೂರು(reporterkarnataka.com): ಉದ್ದೇಶಿತ ಪಂಪ್ ವೆಲ್ ಖಾಸಗಿ ಬಸ್ ನಿಲ್ಧಾಣಕ್ಕೆ ಸ್ವಾಧೀನಪಡಿಸಿಕೊಂಡ 7 ಎಕರೆ ಭೂಮಿಯ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡುವಲ್ಲಿ ಮಂಗಳೂರು ಮಹಾನಗರಪಾಲಿಕೆ ವಿಫಲವಾದ ಹಿನ್ನೆಲೆಯಲ್ಲಿ ಕಮಿಷನರ್ ಕಚೇರಿ ಜಪ್ತಿ ಮಾಡಲು ಕೋರ್ಟ್ ಆದೇಶ ನೀಡಿದೆ.
ನ್ಯಾಯಾಲಯದ ಸಿಬ್ಬಂದಿಗಳು ಬುಧವಾರ ಕಮಿಷನರ್ ಕಚೇರಿಗೆ ಜಪ್ತಿಗೆ ತೆರಳಿದ್ದು, ಪಾಲಿಕೆಯ ಕೋರಿಕೆ ಮೇರೆಗೆ ಪರಿಹಾರ ನೀಡಲು ಅ.25ರ ವರೆಗೆ ಕಾಲಾವಕಾಶ ನೀಡಿದೆ.
ಪಂಪ್ ವೆಲ್ ನಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು 2008ರಲ್ಲಿ 7 ಎಕರೆ ಭೂಮಿಯನ್ನು ಸ್ವಾಧೀನಪಡಿಸಲಾಗಿತ್ತು. ಆದರೆ ನಿಗದಿ ಪಡಿಸಿದ ಪರಿಹಾರದ ಬಗ್ಗೆ ಭೂಮಿ ಕಳೆದುಕೊಂಡ ಸಂತ್ರಸ್ತರು ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆಯೂ 2018ರಲ್ಲೇ ಕೋರ್ಟ್ ಆದೇಶ ನೀಡಿತ್ತು. ಆದರೆ ಪಾಲಿಕೆ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಆಯುಕ್ತರ ಕಚೇರಿ ಜಫ್ತಿ ಮಾಡುವಂತೆ ಆದೇಶ ನೀಡಿತ್ತು.