12:52 AM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ : ಶಾಸಕಾಂಗ ಸಭೆಯಲ್ಲಿ ನಿರ್ಧಾರ

27/07/2021, 19:54

ಬೆಂಗಳೂರು (Reporter Karnataka.com)

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರವೇ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು