8:17 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿಗ್​ ಬಾಸ್​ ಕನ್ನಡ ಒಟಿಟಿ: ಸೋನು​ ಗೌಡಗೆ  ಸಿಕ್ಕಾಪಟ್ಟೆ ಜನಬೆಂಬಲ; ಎಲಿಮಿನೇಷನ್​ನಿಂದ ಬಚಾವ್

14/08/2022, 19:30

ಬೆಂಗಳೂರು(Reporterkarnataka.com):ರೀಲ್ಸ್​ ಹಾಗೂ ವಿವಾದ ಮೂಲಕ ಫೇಮಸ್​ ಆಗಿದ್ದ ಸೋನು ಶ್ರೀನಿವಾಸ್​ ಗೌಡ ಅವರನ್ನು ಜನರು ಸಿಕ್ಕಾಪಟ್ಟೆ ಟ್ರೋಲ್​ ಮಾಡುತ್ತಿದ್ದರೂ‘ಬಿಗ್​ ಬಾಸ್​ ಕನ್ನಡ ಒಟಿಟಿ ಶೋನಲ್ಲಿ ಅವರನ್ನು ಸಪೋರ್ಟ್​ ಮಾಡುವವರ ಸಂಖ್ಯೆ ದೊಡ್ಡದಿದೆ.

ಬಿಗ್​ ಬಾಸ್​ ಕನ್ನಡ ಒಟಿಟಿ ಶೋನ ಮೊದಲ ವಾರದಲ್ಲಿ ಸೋನು​ ಗೌಡ ನಾಮಿನೇಟ್​ ಆಗಿದ್ದರು. ಆದರೆ ಜನರಿಂದ ವೋಟ್​ ಪಡೆಯುವ ಮೂಲಕ ಅವರು ಸೇಫ್​ ಆಗಿ ಬಿಗ್ ಬಾಸ್ ಮನೆಯಲ್ಲಿ ಉಳಿದಿದ್ದಾರೆ. 

ಮೊದಲ ವಾರದ ಎಲಿಮಿನೇಷನ್​ನಿಂದ ಬಚಾವ್​ ಆಗಿರುವ ಸೋನು ಶ್ರೀನಿವಾಸ್​ ಗೌಡ ಕುಣಿದು ಕುಪ್ಪಳಿಸಿದ್ದಾರೆ. ಇನ್ನೋರ್ವ ಸ್ಪರ್ಧಿ ಕಿರಣ್​ ಯೋಗೇಶ್ವರ್​ ಎಲಿಮಿನೇಟ್​ ಆಗಿದ್ದಾರೆ.

ಈ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರ ಖಾಸಗಿ ವಿಡಿಯೋ ವೈರಲ್​ ಆಗಿ ಆ ಬಳಿಕ ಟ್ರೋಲಿಗರ ಕೆಂಗಣ್ಣಿಗೆ ಗುರಿ ಆಗಿದ್ದರು. ಆ ಕಹಿ ಘಟನೆ ನಡೆದಿದ್ದು ಹೇಗೆ ಎಂಬ ಬಗ್ಗೆ ಮೊದಲ ವಾರವೇ ಸೋನು ಗೌಡ ಬಿಗ್​ ಬಾಸ್​ ಮನೆಯಲ್ಲಿ ಬಾಯ್ಬಿಟ್ಟಿದ್ದಾರೆ. ಅಲ್ಲದೇ, ‘ನನ್ನದು ಇನ್ನೊಂದು ವಿಡಿಯೋ ಇದ್ದು, ಅದು ಯಾವಾಗ ಹೊರಬರುತ್ತೋ ಗೊತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು