8:24 PM Monday3 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:…

ಇತ್ತೀಚಿನ ಸುದ್ದಿ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ಗೆಲ್ಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

03/11/2025, 18:17

ಮೈಸೂರು(reporterkarnataka.com): ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು ಎಂದರು. ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ. ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿಮಾಹೆ 2000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು,ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆ ಎಂದರು.

*ರಾಜ್ಯೋತ್ಸವ ಪ್ರಶಸ್ತಿ:*
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಬಾರಿ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದರು.

*ಹುಲಿ ದಾಳಿ ಪ್ರಕರಣದ ಪರಿಶೀಲನೆಗೆ ಶೀಘ್ರದಲ್ಲಿ ಸಿಎಂ ಸಭೆ:*
ಮೈಸೂರಿನಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಭೆ ಈಗಾಗಲೇ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದರು.

*ಹೈಕಮಾಂಡ್ ತೀರ್ಮಾನ ಅಂತಿಮ:*
ರಾಜ್ಯದಲ್ಲಿ ನೆಲೆಸಿರುವ ಬಿಹಾರಿ ಮತದಾರರು,ಕರ್ನಾಟಕದ ಮುಖ್ಯಮಂತ್ರಿಗಳ ಬದಲಾವಣೆ ಕುರಿತ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರು ಅಭಿಪ್ರಾಯವೇನೇ ಇದ್ದರೂ, ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿರುವುದಿಲ್ಲ . ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನ್ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು