2:18 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಬಿಹಾರದ ಕಿಶನ್ ಗಂಜ್‍ನಲ್ಲಿ ಕಾಫಿನಾಡು ಚಿಕ್ಕಮಗಳೂರಿನ ಯೋಧನ ಮೃತದೇಹ ಪತ್ತೆ 

13/06/2022, 10:04

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು
info.reporterkarnataka@gmail.com

ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್‍ನಲ್ಲಿ ಪತ್ತೆಯಾಗಿದೆ. 

ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ಸೇನೆ ತಂಡ ಕೂಡಿಕೊಳ್ಳಬೇಕಾದ ಕಾರಣ ಮೊನ್ನೆ ಜೂನ್ 9ರಂದು ಮನೆಯಿಂದ ವಾಪಸ್ ಹೋಗಿದ್ದರು. ಇಂದು ಸೇನೆ ತಂಡ ಕೂಡಿಕೊಳ್ಳಬೇಕಿತ್ತು. ಆದರೆ, ಸೇನೆಗೆ ಹೋಗುವ ಮುನ್ನವೇ ಬಿಹಾರದ ಕಿಶನ್‍ಗಂಜ್‍ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ನಿನ್ನೆ ಬೆಳಗ್ಗೆ ಅವರ ಪತ್ನಿ ಗಣೇಶ್ ಜೊತೆ ಮಾತನಾಡಿದ್ದರು. ಆಗ ಅವರು ಮುಖ ತೊಳೆಯುತ್ತಿದ್ದೇನೆ ಎಂದು ಹೇಳಿದ್ದರು. ಆದರೆ, ಮಧ್ಯಾಹ್ನದ ನಂತರ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಮತ್ತೆ ಕರೆ ಮಾಡಿಲ್ಲ. ಆದರೆ, ನಿನ್ನೆ ರಾತ್ರಿ ಸೇನೆ ಅಧಿಕಾರಿಗಳು ಕರೆ ಮಾಡಿ ಗಣೇಶ್ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಿಹಾರದ ಕಿಶನ್ ಗಂಜ್‍ನಲ್ಲಿ ಅವರ ಮೃತದೇಹ ಕಂಡ ಆಂಬುಲೆನ್ಸ್ ಚಾಲಕ ಜೇಬಿನಲ್ಲಿದ್ದ ಐಡಿ ಕಾರ್ಡ್ ಹಾಗೂ ಆರ್ಮಿಯ ಪಾಸ್‍ಔಟ್ ನೋಡಿ ಈತ ಯೋಧ ಎಂದು ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸೇನೆಗೆ ವಾಪಸ್ ಹೋಗೇ ಇಲ್ಲ. ಅವರು ಹೇಗೆ ಸಾವನ್ನಪ್ಪಿದರು ಎಂಬುದು ಕುಟುಂಬಸ್ಥರು ಹಾಗೂ ಸ್ಥಳಿಯರಲ್ಲಿ ಯಕ್ಷಪ್ರಶ್ನೆಯಾಗಿದೆ. ತಾಲೂಕಿನ ಮಸಿಗದ್ದೆ ಗ್ರಾಮದ ನಾಗಯ್ಯ-ಗಂಗಮ್ಮ ದಂಪತಿಯ ಪುತ್ರನಾದ ಗಣೇಶ್ ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತ ಯೋಧ ಗಣೇಶ್ ಪ್ರಸ್ತುತ ಜಮ್ಮುವಿನಲ್ಲಿ ಸಿಗ್ನಲ್ ರೆಜಿಮೆಂಟ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಗಣೇಶ್ ಐದು ವರ್ಷದ ಓರ್ವ ಹೆಣ್ಣು ಮಗಳಿದ್ದಾಳೆ. ಕಳೆದ ಮೂರು ವರ್ಷಗಳ ಹಿಂದೆ ನಾಗಯ್ಯ-ಗಂಗಮ್ಮ ದಂಪತಿಯ ಇನ್ನೊಬ್ಬ ಮಗ ಹಾಗೂ ಯೋಧ ಗಣೇಶ್ ಸಹೋದರ ಕೂಡ ತೀರಿಕೊಂಡಿದ್ದರು. ಇದೀಗ ಯೋಧ ಗಣೇಶ್ ಕೂಡ ಸಾವನ್ನಪ್ಪಿದ್ದಾರೆ. ಇದರಿಂದ ಕುಟುಂಬಕ್ಕೆ ಆಧಾರವೇ ಇಲ್ಲದಂತಾಗಿದೆ. ಯೋಧನ ಸಾವಿನಿಂದ ಕುಟುಂಬ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮೃತ ಯೋಧ ಗಣೇಶ್ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು