9:59 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಬಿಜೂರು: ದನ ಅಡ್ಡ ಬಂದು ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಸಿಮೆಂಟ್ ಲಾರಿ; ಚಾಲಕ ಸಹಿತ 4 ಮಂದಿ ಗಂಭೀರ

24/08/2022, 18:01

ಬಿಜೂರು(reporterkarnataka.com):
ದನವೊಂದು‌ ಅಡ್ಡಬಂದ ಪರಿಣಾಮ ಸಿಮೆಂಟ್ ಸಾಗಾಟದ ಮಿನಿ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಮಗುಚಿಬಿದ್ದ ಘಟನೆ ಬೈಂದೂರು ಸಮೀಪದ ಬಿಜೂರು ಶಾಲೆಬಾಗಿಲು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಚಾಲಕ ಸಹಿತ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಸಿಮೆಂಟ್ ತುಂಬಿದ ಲಾರಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಪ್ರಯಾಣಿಸುತ್ತಿತ್ತು. ಬಿಜೂರು ಶಾಲೆಬಾಗಿಲು ನಡುವೆ ಇದ್ದಕ್ಕಿದ್ದಂತೆ ದನವೊಂದು ಅಡ್ಡ ಬಂದಿದ್ದು, ಇದರಿಂದ ಚಾಲಕ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ರಸ್ತೆ ಬದಿಯ ಕಂದಕಕ್ಕೆ ಪಲ್ಟಿಯಾಗಿ ಬಿದ್ದಿದೆ. ಅಪಘಾತದ ಪರಿಣಾಮ ಸಿಮೆಂಟ್ ಚೀಲಗಳು ಚೆಲ್ಲಾಪಿಲ್ಲಿಯಾಗಿವೆ. ಘಟನೆಯಲ್ಲಿ ಲಾರಿಯಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು