9:30 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೈಕ್ ಕಳ್ಳತನ ಮಾಡುತ್ತಿದ್ದ ಯುವ ಗ್ಯಾಂಗ್ ಪೊಲೀಸ್ ಬಲೆಗೆ: ಅಥಣಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

03/07/2022, 02:16

ರಾಹುಲ್ ಬೆಳಗಾವಿ
info.reporterkarnataka@gmail.com

ಹಲವು ದಿನಗಳಿಂದ ಅಥಣಿ ತಾಲೂಕಿನಲ್ಲಿ ನಡೆಯುತ್ತಿದ್ದ ಬೈಕ್ ಕಳ್ಳತನಕ್ಕೆ ಅಥಣಿ ಪೊಲೀಸರು ಬ್ರೇಕ್ ಹಾಕಿದ್ದಾರೆ. 6ಕ್ಕೂ ಹೆಚ್ಚು ಬೈಕ್ ಕಳ್ಳತನ ಮಾಡಿದ ಗ್ಯಾಂಗ್ ನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

ಪೋಲಿಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ,  ಹೆಚ್ಚುವರಿ ಪೋಲಿಸ್ ಅಧಿಕ್ಷಕ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡ, ಪಿಎಸ್ಐ ಕುಮಾರ ಹಾಡಕಾರ ಅವರ ನೇತೃತ್ವದಲ್ಲಿ ತಂಡ ಬಲೆ ಬೀಸಿ 3 ಮಂದಿ ಆರೋಪಿತರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸತ್ತಿ ಗ್ರಾಮದ ಆನಂದ ಗುಳಗಾವಿ (20), ಪವನ ಗಾಯಕವಾಡ (20) ಹಾಗೂ ಬರಮಖೋಡಿ ಗ್ರಾಮದ ವಿಕ್ರಮ ಸಾಳುಂಕೆ (20) ಎಂದು ತಿಳಿದು ಬಂದಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಡಿವೈಎಸ್ಪಿ ಎಸ್. ವಿ. ಗಿರೀಶ್ ಹಾಗೂ ಸಿಪಿಐ ಶಂಕರಗೌಡ ಬಸನಗೌಡ ಅವರ ಮಾರ್ಗದರ್ಶನದಂತೆ ಪಿಎಸ್ಐ ಕುಮಾರ ಹಾಡಕರ ಅವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ರಚನೆ ಮಾಡಿ ಸತತ ಕಾರ್ಯಾಚಣೆ ನಡೆಸಿ ಮೋಟಾರ್ ಸೈಕಲ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಅಥಣಿ ಪೋಲಿಸ್ ಇಲಾಖೆ ಯಶಸ್ವಿಯಾಗಿದೆ. 


ಈ ವೇಳೆ ವಿ ಜಿ ಆರೇರ, ಬಿ ಜೆ ತಳವಾರ, ಎ ಎ ಇರಕರ, ಜಿ ಎಚ್ ಹೊನವಾಡ, ಜಮೀರ ಡಾಂಗೆ, ಕೆ ಬಿ ಸಿರಗೂರ, ಆರ್ ಸಿ ಹಾದಿಮನಿ, ಎಮ್ ಎಮ್ ಖೋತ್ ಸೇರಿದಂತೆ ಇತರರು ತಂಡದಲ್ಲಿ ಭಾಗಿಯಾಗಿದ್ದರು.

ಪೊಲೀಸರ ಕಾರ್ಯಕ್ಕೆ ಜನ ಸಾಮಾನ್ಯರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು