3:02 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿನಲ್ಲಿ ಬೈಕ್ ರ‍್ಯಾಲಿ: ಹಸಿರು ಪರಿಸರ ಕಾಪಾಡುವಂತೆ ಶಾಸಕಿ ನಯನಾ ಮೋಟಮ್ಮ ಕರೆ

29/11/2025, 17:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯಲ್ಲಿ ಅತ್ಯಧಿಕ ಪ್ರವಾಸಿ ತಾಣಗಳನ್ನು ಹೊಂದಿರುವ ಮೂಡಿಗೆರೆ ತಾಲೂಕು ವರ್ಷಪೂರ್ತಿ ಹಸಿರುಮಯ ವಾತಾವರಣದಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಸುಂದರ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಇಲ್ಲಿ ಭೇಟಿ ನೀಡುವ ಚಾರಣಿಗರೂ ಸಹ ಪ್ರಕೃತಿಯನ್ನು ಕಾಪಾಡಬೇಕು ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ಪ್ರವಾಸೋದ್ಯಮ ಇಲಾಖೆ ಹಾಗೂ ತಾಲ್ಲೂಕಿನ ಹೋಂ ಸ್ಟೇ–ರೆಸಾರ್ಟ್ ಮಾಲೀಕರು ವತಿಯಿಂದ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಹಸಿರು ನಿಷಾಣೆ ತೋರಿಸಿ ಉದ್ಘಾಟನೆ ಮಾಡಿದ ಅವರು ಮಾತನಾಡಿದರು.


ರಾಜ್ಯದ ವಿವಿಧ ಭಾಗಗಳು ಸೇರಿದಂತೆ ಹೊರರಾಜ್ಯಗಳಿಂದಲೂ ಮೂಡಿಗೆರೆಗೆ ಪ್ರವಾಸಿಗರ ಸಂಚಾರ ಹೆಚ್ಚುತ್ತಿರುವುದು ತಾಲ್ಲೂಕಿನ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದೆ. ಆದರೆ ಪ್ರವಾಸಿಗರು ಮಲಿನ ಮಾಡದೇ, ಪ್ಲಾಸ್ಟಿಕ್ ಬಳಕೆ ತಪ್ಪಿಸಿ, ಬೆಟ್ಟಗುಡ್ಡಗಳ ಪರಿಸರವನ್ನು ಹಾನಿಗೊಳಿಸದೆ ಸುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು. ಪ್ರಕೃತಿಯನ್ನು ಕಾಪಾಡುವುದು ಮುಂದಿನ ತಲೆಮಾರಿಗೆ ನಮ್ಮಿಂದ ಆಗಬೇಕಾದ ಮುಖ್ಯ ಹೊಣೆ ಎಂದು ಶಾಸಕಿ ಹಿತರಕ್ಷಕ ಸಂದೇಶ ನೀಡಿದರು.
87 ಬೈಕರ್ ಹಾಗೂ ಬ್ಲಾಗರ್‌ಗಳ ಭಾಗವಹಿಸಿದ್ದರು.
ಬೈಕ್ ರ‍್ಯಾಲಿಯಲ್ಲಿ ಸುಮಾರು 87 ಬೈಕರ್‌ಗಳು ಮತ್ತು ಬ್ಲಾಗರ್‌ಗಳು ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದರು.
ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಿದ ಹಾಸನದ ಬೈಕರ್ ಭೂಷಣ್ ಜೈನ್ ಅವರು, ಮೂಡಿಗೆರೆ ತಾಲೂಕು ನಿಜಕ್ಕೂ “ಮಲೆನಾಡಿನ ಸ್ವರ್ಗ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ದೇವರ ಮನೆ, ಎತ್ತಿನಬುಜ, ರಾಣಿ ಜರಿ, ದುರ್ಗದಹಳ್ಳಿ, ಕೊಟ್ಟಿಗೆಹಾರ ಸೇರಿದಂತೆ ಕುತೂಹಲ ಕಾರಕ ಪ್ರವಾಸಿ ತಾಣಗಳು ಪ್ರವಾಸಿಗರನ್ನು ಸೆಳೆಯುತ್ತವೆ. ಪ್ರವಾಸಪ್ರಿಯರು ಇಲ್ಲಿಗೆ ಭೇಟಿ ನೀಡಿ ನೈಸರ್ಗಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳಬೇಕೆಂದು ಅವರು ಕರೆ ನೀಡಿದರು.
ಮೂಡಿಗೆರೆ ಹೋಂ ಸ್ಟೇ ಅಸೋಸಿಯೇಶನ್ ಮತ್ತು ಚಿಕ್ಕಮಗಳೂರು ಪ್ರವಾಸೋದ್ಯಮ ಇಲಾಖೆ ತುಂಬ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದ್ದನ್ನು ಅವರು ಶ್ಲಾಘಿಸಿ, ಇಂತಹ ಕಾರ್ಯಕ್ರಮಗಳನ್ನು ವರ್ಷಗಟ್ಟಲೆ ನಡೆಸುವುದರಿಂದ ಪ್ರವಾಸೋದ್ಯಮ ಮತ್ತಷ್ಟು ಬೆಳವಣಿಗೆ ಕಾಣುತ್ತದೆ ಎಂದು ಹೇಳಿದರು.
ಎತ್ತಿನಬುಜಕ್ಕೆ ತೆರಳುವ ದಾರಿಯಲ್ಲಿ ಮಹಿಳೆಯರಿಗಾಗಿ ಶೌಚಾಲಯದ ಅಗತ್ಯವಿದ್ದು, ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಂಡರೆ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು.
ಹೋಂ ಸ್ಟೇ ಮಾಲೀಕರ ಸಂಘದ ಅಧ್ಯಕ್ಷ ಜಗಣ್ಣ ಗುತ್ತಿ, ಕಾರ್ಯದರ್ಶಿ ರಾಘವೇಂದ್ರ ಕೆಸವಳಲು, ಉಪಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಖಜಾಂಚಿ ಬಿ.ಎಂ. ಸತೀಶ್, ಸಂಜಯ್ ಕೊಟ್ಟಿಗೆಹಾರ, ಕಾರ್ತಿಕ್ ಪಟದೂರು, ರೀತೀಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು