4:47 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಬಿಲ್ಲವರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಟಿಕೆಟ್ ನಿರಾಕರಿಸಿದರೆ ಸ್ವತಂತ್ರ ಅಭ್ಯರ್ಥಿಗಳು ಕಣಕ್ಕೆ: ಡಾ. ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ

26/03/2023, 21:37

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಿಕೆಟ್ ವಿತರಣೆಗೆ ಸಂಬಂಧಿಸಿದ ವಿಷಯ ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿ ಪರಿಣಮಿಸಲಾರಂಭಿಸಿದೆ. ಬಿಲ್ಲವ ಸಮುದಾಯದ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಅವಕಾಶ ನೀಡುವಂತೆ ಹಕ್ಕೊತ್ತಾಯ ಮತ್ತೆ ಮಾಡಲಾಗಿದೆ. ಇದು ಕಾಂಗ್ರೆಸ್ ಮಾತ್ರವಲ್ಲದೆ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳ ಕೊರಳು ಸುತ್ತುವ ಸಾಧ್ಯತೆಗಳಿವೆ. ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಕಾಂಗ್ರೆಸ್ ಹೈಕಮಾಂಡ್ ಗೆ ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಡುಗಡೆ ಮಾಡಿದ ಮೊದಲನೇ ಪಟ್ಟಿಯಲ್ಲಿ ಬಿಲ್ಲವ, ನಾಮಧಾರಿ, ಈಡಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಎರಡನೇ ಪಟ್ಟಿಯಲ್ಲಿಯೂ ಅನ್ಯಾಯವಾದರೆ ನಮ್ಮ ದಾರಿ ನಮಗೆ ಎಂದು ಖಡಕ್ ಸೂಚನೆಯನ್ನು ರವಾನಿಸಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರ ಸೇರಿದಂತೆ ಬಿಲ್ಲವ ಮತಗಳು ಹೆಚ್ಚು ಇರುವ ಕ್ಷೇತ್ರಗಳಲ್ಲಿ ಬಿಲ್ಲವ ಸಮುದಾಯಕ್ಕೆ ಅವಕಾಶ ನೀಡದೇ ಇದ್ದಲ್ಲಿ, 2ನೇ ಪಟ್ಟಿಯಲ್ಲಿ ಅವಕಾಶ ನೀಡದೇ ಇದ್ದಲ್ಲಿ ಸ್ವತಂತ್ರ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲಾಗುವುದು.
ಬಿಲ್ಲವ ಸಮುದಾಯಕ್ಕೆ ತಲಾ 10 ಸ್ಥಾನ ನೀಡಬೇಕು ಎಂದು ಎಲ್ಲ ಪಕ್ಷಗಳಿಗೆ ಆಗ್ರಹ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭೆ ಕ್ಷೇತ್ರದಲ್ಲಿ 6 ಕಡೆಗಳಲ್ಲಿ ಅತಿ ಹೆಚ್ಚು ಬಿಲ್ಲವರು ಇದ್ದಾರೆ. ಆದರೆ, ಬೆಳ್ತಂಗಡಿ ಕ್ಷೇತ್ರದಲ್ಲಿ ಮಾತ್ರ ಟಿಕೆಟ್ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ 11ಕ್ಕೂ ಹೆಚ್ಚು ಮಂದಿ 2 ಲಕ್ಷ ರೂಪಾಯಿ ಕಟ್ಟಿ ಅರ್ಜಿ ಹಾಕಿದ್ದರೂ ಅವರಿಗೆ ಟಿಕೆಟ್ ಸಿಕ್ಕಿಲ್ಲ.
ಅರ್ಜಿ ಹಾಕಿದವರೆಲ್ಲ ಮಾಜಿ ಮೇಯರ್ ಸೇರಿದಂತೆ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದವರು ಇದ್ದಾರೆ. ಈಗಾಗಲೇ ಬಿಲ್ಲವ ಮತದಾರರು ಹೆಚ್ಚಿರುವ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಮಾಡಿರುವ ಕ್ಷೇತ್ರಗಳಲ್ಲಿ ಬಿಲ್ಲವರಿಗೆ ಟಿಕೆಟ್ ನೀಡಲೇಬೇಕು. ಇಲ್ಲದೇ ಇದ್ದಲ್ಲಿ ಅಂತಹ ಕ್ಷೇತ್ರಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಬಿಲ್ಲವ, ಈಡಿಗ, ನಾಮಧಾರಿಗಳಿಗೆ ಹೆಚ್ಚು ಸ್ಥಾನಗಳನ್ನು ನೀಡಬೇಕು. ಈಗಾಗಲೇ ನಾನು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಅವರಿಗೆ ಮನವರಿಕೆ ಮಾಡಿ ಬಂದಿದ್ದೇನೆ. ಸೋಮವಾರ ಮತ್ತೆ ದೆಹಲಿಗೆ ಹೋಗಿ ಮತ್ತೆ ಮಾತುಕತೆ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಹಾಕಿದವರ ಜತೆಗೆ ಮಂಗಳೂರಿನ ಸಭೆ ಮಾಡಲಿದ್ದು, ಅವರ ಭಾವನೆಗಳು ಹಾಗೂ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ. ಜಿಲ್ಲೆಯ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಅನ್ಯಾಯವನ್ನು ಸರಿಪಡಿಸಬೇಕು. ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ನೀಡಬೇಕು. ಕನಿಷ್ಠ ಇನ್ನೂ ಎರಡು ಟಿಕೆಟ್ ಗಳನ್ನು ನಮ್ಮ ಸಮುದಾಯಕ್ಕೆ ನೀಡಬೇಕು. ಇಲ್ಲದೇ ಇದ್ದಲ್ಲಿ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡುವುದು ಅನಿವಾರ್ಯ ಎಂದರು ತಿಳಿಸಿದರು.
ಮಂಗಳೂರು ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಿತೇಂದ್ರ ಜಿ ಸುವರ್ಣ, ಲೋಕನಾಥ ಪೂಜಾರಿ, ಸುರೇಶ್ ಚಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು