10:45 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಬಿರುಸುಗೊಂಡ ಮುಂಗಾರು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ; ಬೋಳೂರು ಸ್ಮಶಾನ ಆವರಣ ಗೋಡೆ ಕುಸಿತ

14/06/2021, 12:51

ಮಂಗಳೂರು(reporterkarnataka news) ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಅರಬ್ಬಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾದ ಎರಡು ಚಂಡ ಮಾರುತ ಪರಿಣಾಮ ಆರಂಭದಲ್ಲೇ ಮುಂಗಾರು ದುರ್ಬಲಗೊಂಡಿತ್ತು. ಆದರೆ ಜೂನ್ ಮಧ್ಯಭಾಗ ಪ್ರವೇಶಿಸುತ್ತಿದ್ದಂತೆ ಮುಂಗಾರು ಮತ್ತಷ್ಟು ಬಿರುಸುಗೊಂಡಿದೆ.

ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಯಲ್ಲೋ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯಿಂದ ಮಂಗಳೂರಿನಲ್ಲಿ ಬಹುತೇಕ ತಗ್ಗು ಪ್ರವೇಶಗಳು ಜಲಾವೃತವಾಗಿವೆ. ನಗರದಲ್ಲಿ ಹಲವೆಡೆ ರಸ್ತೆಯಲ್ಲಿ ನೀರು ನಿಂತು ಜನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ನಗರದ ಕದ್ರಿಕಂಬಳ, ಮಾಲೆಮಾರ್, ಕೊಟ್ಟಾರ ಚೌಕಿ, ಕುದ್ರೋಳಿ, ಅತ್ತಾವರ ಮುಂತಾದ ಕಡೆಗಳಲ್ಲಿ ರಸ್ತೆ ಮೇಲೆ ನೀರು ನಿಂತಿದೆ. ಬೋಳಾರು ಸ್ಮಶಾನದ ಆವರಣ ಗೋಡೆ ಭಾರಿ ಮಳೆಗೆ ಇಂದು ಮುಂಜಾನೆ ರಸ್ತೆಗೆ ಕುಸಿದು ಬಿದ್ದಿದೆ. ಸ್ಥಳೀಯ ಕಾರ್ಪೊರೇಟರ್ ಜಗದೀಶ ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಆಗಮಿಸಿ ತೆರವುಗೊಳಿಸಿದ್ದಾರೆ. ನಗರದ ಹೊರವಲಯದ ಅಡ್ಯಾರ್, ಅರ್ಕುಳದ ತಗ್ಗು ಪ್ರದೇಶ ಜಲಾವೃತವಾಗಿದೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು