3:59 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ 7ನೇ ವಾರ್ಷಿಕೋತ್ಸವ; ಪದಗ್ರಹಣ ಕಾರ್ಯಕ್ರಮ

12/02/2024, 21:12

ಬಂಟ್ವಾಳ (reporterkarnataka.com):ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ. ನೈತಿಕ ಗುಣಮಟ್ಟವನ್ನು ಬೆಳೆಸಿ. ಬೇರೆ ಯಾವುದೇ ಆಸ್ತಿಮಾಡಿ ಕೊಡುವ ಅಗತ್ಯವಿಲ್ಲ ಎಂದು ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ಹೇಳಿದರು.
ಅವರು ಬಂಟ್ವಾಳ ತಾಲೂಕಿನ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.)ಇದರ 7ನೇ ವರ್ಷದ ವಾರ್ಷಿಕೋತ್ಸವ, ಪದಗ್ರಹಣ ಕಾರ್ಯಕ್ರಮವನ್ನು ಭಾನುವಾರ ಪೆರ್ಲಾಪು ಪ್ರಾಥಮಿಕ ಶಾಲಾ ವಠಾರದಲ್ಲಿ ಪ್ರಧಾನ ಭಾಷಣಗಾರರಾಗಿ ಮಾತನಾಡಿದರು . ಟ್ರಸ್ಟ್ ನ ಗೌರವ ಅಧ್ಯಕ್ಷ ಮೋಹನ್ ಕುಮಾರ್ ಕಲ್ಲಾಜೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಡೇಶಿವಾಲಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಮಾತನಾಡಿ ಸ್ವಾರ್ಥ ರಹಿತ ಸೇವೆ ದೇವರ ಸೇವೆ ಆಗಿದೆ ಸಂಘಟನೆ ಇರುವುದು ತಮ್ಮ ರಕ್ಷಣೆಗೆ ಹೊರತು ಉಳಿದವರನ್ನು ನಾಶ ಮಾಡುವುದಕ್ಕೆ ಅಲ್ಲ ಎಂದರು. ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೆ.ವಿ., ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಜಯಂತ್ ನಡುಬೈಲ್, ಯಕ್ಷಗಾನ ಹಾಸ್ಯಕಲಾವಿದ ನಾರಾಯಣ ಉಜಿರೆ, ಇವರನ್ನು ಸನ್ಮಾನಿಸಲಾಯಿತು . ಕೃಷಿ ಕ್ಷೇತ್ರ ದಲ್ಲಿ ಸಾಧನೆಗೈದ ಗೌರಿ ಕೆ. ಬಂಗೇರ ಬಡಕಬೈಲ್, ನಾಟಿ ಪ್ರಸೂತಿ ಪ್ರವೀಣೆ ಪೂವಕ್ಕ ಕಡೆಕೋಳಿಮಜಲ್, ಕುಲಕಸುಬು ಮೂರ್ತೆದಾರಿಕೆ ಕ್ಷೆತ್ರದಲ್ಲಿ ವಾಸು ಪೂಜಾರಿ ನೆತ್ತರ, ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ ಆಧ್ಯಕ್ಷೆ ಸಾನ್ವಿ ಅವರುಗಳನ್ನು ಅಭಿನಂದಿಸಲಾಯಿತು . ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು .ಗಣ್ಯರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷರಾದ ಜಯಂತ್ ನಡುಬೈಲ್ ಬಿರುವೆರ್ ಸೇವಾ ಟ್ರಸ್ಟ್ (ರೀ )ಕಡೇಶಿವಾಲಯ ಇದರ ಸೇವಾ ಕಾರ್ಯಕ್ರಮ ಉಳಿದ ಸಂಘಟನೆಗಳಿಗೆ ಅನುಕರಣಿಯವಾಗಿದೆ, ಸಂಘಟಯೊಂದಿಗೆ ತಾನು ಕೈಜೋಡಿಸುದಾಗಿ ಹೇಳಿ ಈ ತನಕ ಬಿರುವೆರ್ ಕಡೇಶಿವಾಲಯ ಟ್ರಸ್ಟ್ ನ ಮೂ ಟ್ರಸ್ಟ್ ನ ಅಧ್ಯಕ್ಷ ದಿನೇಶ್ ಪೂಜಾರಿ ಸುರ್ಲಾಜೆ, ಕಾರ್ಯದರ್ಶಿ ಯಶವಂತ್ ಪತ್ತು ಕೊಡಂಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ನಂತರ ವಿದ್ಯಾಧರ ಪೂಜಾರಿ ಕಡೇಶಿವಾಲಯ ಅಧ್ಯಕ್ಷತೆ ಹಾಗೂ ಕಾರ್ಯದರ್ಶಿ ಯಶವಂತ್ ಪತ್ತು ಕೊಡಂಗೆ ಯ ನೂತನ ಸಮಿತಿಯ ಪದಗ್ರಹಣ ಮಾಡಲಾಯಿತು . ಲೋಕನಾಥ ಪೂಜಾರಿ ತಿಮರಾಜೆ ಸ್ವಾಗತಿಸಿ,ಸಂಧ್ಯಾ ವಿದ್ಯಾಧರ್ ಹಾಗೂ ಕೀರ್ತಿ ಸನ್ಮಾನಿತರ ಸನ್ಮಾನ ಪತ್ರ ವಾಚಿಸಿ,ದಿನೇಶ್ ಪೂಜಾರಿ ಸುರ್ಲಾಜೆ ವಂದಿಸಿ, ದೀಪಕ್ ಹಾಗೂ ಭವ್ಯಶ್ರೀ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು