4:45 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬಿಜೆಪಿ 12ನೇ ಶತಮಾನದಲ್ಲಿ ಇದ್ದಿದ್ದರೆ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿತ್ತು: ಸಚಿವ ಪ್ರಿಯಾಂಕ್ ಖರ್ಗೆ

29/01/2025, 14:49

ಬೆಂಗಳೂರು(reporterkarnataka.com):ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ!
ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ!
ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಹೇಳಿದರು.

– “ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು
ದಕ್ಷಿಣದ ದೇಶಕದು ಕುದುರೆಯಹುದೆ?“
ಎಂದು ಹೇಳಿದ ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ?

– ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ.

– ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ?

– ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ?

– ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?

– ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ?

”ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ” ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ, ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ, ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ.

ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ, ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ, ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ.
ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ,
ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ.
ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ಪ್ರಿಯಾಂಕ್ ಖರ್ಗೆ ಸವಾಲೆಸಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು