ಇತ್ತೀಚಿನ ಸುದ್ದಿ
ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಬೈಂದೂರು ಸುಕುಮಾರ್ ಶೆಟ್ಡಿ, ಮೂಡಿಗೆರೆ ಕುಮಾರಸ್ವಾಮಿ ಸಹಿತ 7 ಮಂದಿ ಹಾಲಿಗಳಿಗೆ ಟಿಕೆಟ್ ಮಿಸ್
13/04/2023, 00:31

ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ 2ನೇ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದೆ. ಬೈಂದೂರಿನ ಹಾಲಿ ಶಾಸಕ ಸುಕುಮಾರ ಶೆಟ್ಡಿ, ಮೂಡಿಗೆರೆಯ ಎಂ.ಪಿ. ಕುಮಾರಸ್ವಾಮಿ ಸಹಿತ 7 ಮಂದಿಗೆ ಟಿಕೆಟ್ ಮಿಸ್ ಆಗಿದೆ.
ಬಿಜೆಪಿ ಹೈಕಮಾಂಡ್ ಮಂಗಳವಾರ ರಾತ್ರಿ 189 ಮಂದಿಯ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಅದ ಬೆನ್ನಲ್ಲೆ ಬುಧವಾರ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಬೈಂದೂರು ಕ್ಷೇತ್ರಕ್ಕೆ ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಹೊಸ ಮುಖ ಗುರುರಾಜ ಗಂಟಿಗೊಳಿ ಅವರಿಗೆ ಟಿಕೆಟ್ ನೀಡಲಾಗಿದೆ. ಮೂಡಿಗೆರೆಯ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಹುಬ್ಬಳ್ಳಿ ಸೆಂಟ್ರಲ್ ಹಾಗೂ ಶಿವಮೊಗ್ಗ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಇಡಲಾಗಿದೆ. ಇನ್ನೂ 12 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಇದೆ.