2:39 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಉತ್ತರ ಕನ್ನಡದಿಂದ ಅನಂತ ಕುಮಾರ್ ಹೆಗಡೆ ಔಟ್; ಬೆಳಗಾವಿಯಿಂದ ಶೆಟ್ಟರ್, ಚಿಕ್ಕಬಳ್ಳಾಪುರ ಕೆ. ಸುಧಾಕರ್

24/03/2024, 22:19

ಹೊಸದಿಲ್ಲಿ(reporterkarnataka.com): ಭಾರೀ ಕುತೂಹಲ ಕೆರಳಿಸಿದ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ರಾಜ್ಯದ ಬಾಕಿ ಇರುವ 4 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡುತ್ತಿದ್ದ ಅನಂತ ಕುಮಾರ್ ಹೆಗಡೆ ಅವರಿಗೆ ಉತ್ತರ ಕನ್ನಡದಿಂದ ಟಿಕೆಟ್ ನಿರಾಕರಿಸಲಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಗಾಗಿ ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಹಾಗೂ ಮಾಜಿ ಸ್ಪೀಕರ್
ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಭಾರೀ ಪೈಪೋಟಿ ನಡೆದಿತ್ತು. ಸುಮಾರು 4 ವರ್ಷಗಳ ಕಾಲ ತೆರೆಮರೆಗೆ ಸರಿದಿದ್ದ ಅನಂತ ಕುಮಾರ್ ಹೆಗಡೆ ಇತ್ತೀಚಿಗಿನ ತಿಂಗಳಲ್ಲಿ ತುಂಬಾ ಕ್ರಿಯಾಶೀಲರಾಗಿದ್ದರು. ತನ್ನ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಭಾರಿ ಪ್ರತಿಭಟನೆ ನಡೆದಿತ್ತು. ಇದೀಗ ಬಿಜೆಪಿ 5ನೇ ಪಟ್ಟಿ ಪ್ರಕಟಿಸುವ ಮೂಲಕ ಅವರಿಗೆ ಟಿಕೆಟ್ ನಿರಾಕರಿಸಿದೆ.
ಆ ಮೂಲಕ ದ್ವೇಷ ಭಾಷಣದ ಮೂಲಕವೇ ಸುದ್ದಿಯಾಗುತ್ತಿದ್ದ ನಾಯಕನಿಗೆ ಶಾಕ್ ನೀಡಿದೆ. ಅನಂತ್‌ಕುಮಾರ್ ಹೆಗಡೆಯ ಬದಲಿಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಂಗಳಾ ಅಂಗಡಿ ಬದಲಿಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಟಿಕೆಟ್ ನೀಡಿದ್ದರೂ ಗೆಲ್ಲುವಲ್ಲಿ ವಿಫಲರಾಗಿದ್ದರು. ಕಾಂಗ್ರೆಸ್ ತಕ್ಷಣ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡಿತ್ತು. ಆದರೆ ಶೆಟ್ಟರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ದಿಢೀರ್ ಆಗಿ ಮತ್ತೆ ಬಿಜೆಪಿ ಸೇರಿದ್ದರು.
ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಕೆ. ಸುಧಾಕರ್ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ವರ್ ನಾಯಕ ಅವರು ಟಿಕೆಟ್ ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು