ಇತ್ತೀಚಿನ ಸುದ್ದಿ
ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ: ಬಂಟ್ಸ್ ಹಾಸ್ಟೆಲ್ ನಿಂದ ಬೃಹತ್ ಪಾದಯಾತ್ರೆ
04/04/2024, 14:50

ಚಿತ್ರ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ಪಕ್ಷದ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ಜತೆ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಬಿಜೆಪಿ ಚುನಾವಣಾ ಕಚೇರಿಯಿಂದ ಬೃಹತ್ ಪಾದಯಾತ್ರೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರಿಗೆ ನಾಮಪತ್ರ ಸಲ್ಲಿಸಿದರು.
ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರ ಜತೆಗೆ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಸಂಚಾಲಕರಾದ ಸುನಿಲ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್, ಪ್ರತಾಪ್ ಸಿಂಹ ನಾಯಕ್, ಚುನಾವಣಾ ಉಸ್ತುವಾರಿಗಳಾದ ನಿತಿನ್ ಕುಮಾರ್, ಕೋಶಾಧಿಕಾರಿ ಸಂಜಯ್ ಪ್ರಭು, ರವಿಶಂಕರ ಮಿಜಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.