6:43 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ: ಬಂಟ್ಸ್ ಹಾಸ್ಟೆಲ್ ನಿಂದ ಬೃಹತ್ ಪಾದಯಾತ್ರೆ

04/04/2024, 14:50

ಚಿತ್ರ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.






ಪಕ್ಷದ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ಜತೆ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಬಿಜೆಪಿ ಚುನಾವಣಾ ಕಚೇರಿಯಿಂದ ಬೃಹತ್ ಪಾದಯಾತ್ರೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರಿಗೆ ನಾಮಪತ್ರ ಸಲ್ಲಿಸಿದರು.
ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್‌ ಚೌಟರ ಜತೆಗೆ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಸಂಚಾಲಕರಾದ ಸುನಿಲ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್, ಪ್ರತಾಪ್ ಸಿಂಹ ನಾಯಕ್, ಚುನಾವಣಾ ಉಸ್ತುವಾರಿಗಳಾದ ನಿತಿನ್ ಕುಮಾರ್, ಕೋಶಾಧಿಕಾರಿ ಸಂಜಯ್ ಪ್ರಭು, ರವಿಶಂಕರ ಮಿಜಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು