9:15 AM Tuesday26 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಬಿಜೆಪಿ ಆಡಳಿತದಲ್ಲಿ ಸ್ಮಾರ್ಟ್ ಸಿಟಿ ಅನುದಾನ ದುರ್ಬಳಕೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರೋಪ

30/04/2023, 23:42

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರು ಕೆಎಎಸ್ ಅಧಿಕಾರಿ ಆಗಿದ್ದವರು. ತಮ್ಮದೇ ಸಂಪರ್ಕ ಬಳಸಿಕೊಂಡು ಮಂಗಳೂರು ನಗರಕ್ಕೆ ಸ್ಮಾರ್ಟ್ ಸಿಟಿ ಮತ್ತು ಜಲಸಿರಿ ಯೋಜನೆ ತಂದವರು. ಆದರೆ, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದೊರೆತ ಅನುದಾನವನ್ನು ದುರ್ಬಳಕೆ ಮಾಡಲಾಗಿದೆ. ಸಾರ್ವಜನಿಕರಿಗೆ ಮೂತ್ರ ವಿಸರ್ಜನೆಗೆ ಅಗತ್ಯ ಶೌಚಾಲಯ ಕೂಡ ನಿರ್ಮಾಣ ಮಾಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಆರೋಪಿಸಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಮೂರು ವರ್ಷಗಳ ಆಡಳಿತ ನಡೆಸಿದರೂ ಜನರು ನೆನಪಿನಲ್ಲಿಟ್ಟುಕೊಳ್ಳುವ ಯಾವುದೇ ಸಾಧನೆ ಮಾಡಿಲ್ಲ. ಭ್ರಷ್ಟಾಚಾರ ಎಲ್ಲೆ ಮೀರಿದೆ. ಬೆಲೆ ಏರಿಕೆ ತಡೆಗಟ್ಟುವಲ್ಲಿ ಸರಕಾರ ವಿಫಲವಾಗಿದೆ. ಸಮಾಜದ ಸಾಮರಸ್ಯವನ್ನು ಹಾಳು ಮಾಡಿದೆ ಎಂದು ದೂರಿದರು.
ಕೊರೊನಾ ಕಾಲದಲ್ಲೂ ಸರಕಾರ ಸಮರ್ಪವಾಗಿ ಪರಿಸ್ಥಿತಿಯನ್ನು ನಿಭಾಯಿಸಲಿಲ್ಲ. ಕೋವಿಡ್ ಪ್ಯಾಕೇಜ್ ಯಾರಿಗೂ ತಲುಪಲಿಲ್ಲ. ವಿತರಣೆಯಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಯುವಕರಿಗೆ ಉದ್ಯೋಗ ಸೃಷ್ಠಿಗೆ ಯಾವುದೇ ಯೋಜನೆ ಜಾರಿಗೊಳಿಸಲಿಲ್ಲ ಎಂದು ಪದ್ಮರಾಜ್ ಅರೋಪಿಸಿದರು.
ಬಿಜೆಪಿ ಸರಕಾರದ ಬಗ್ಗೆ ಜನರು ಬಹಳಷ್ಟು ನಿರೀಕ್ಷೆ, ನಂಬಿಕೆ ಇಟ್ಟುಕೊಂಡಿದ್ದರು. ಹಾಗೆಯೇ ಸಾಕಷ್ಟು ಅವಕಾಶ ನೀಡಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜನರನ್ನು ಭಾವನಾತ್ಮಕವಾಗಿ ವಿಭಜನೆ ಮಾಡುವ ಹುನ್ನಾರ ನಡೆಯುತ್ತಿದೆ. ಜನರನ್ನು ಒಡೆದು ಆಳುವ ಬಿಜೆಪಿಯ ತಂತ್ರ ಈ ಬಾರಿ ಫಲ ನೀಡಲ್ಲ ಎಂದರು.
ಬಿಜೆಪಿ ಜಾತಿ, ಧರ್ಮದ ಹೆಸರಲ್ಲಿ ರಾಜಕಾರಣದ ಮೂಲಕ ದೇಶವನ್ನು ಒಡೆಯುತ್ತಿದೆ. ಧರ್ಮ ಧರ್ಮದ ನಡುವೆ ನಡುವೆ ಸಂಘರ್ಷ ಉಂಟು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಬಿಜೆಪಿಯವರು ಆಸ್ತಿ ತೆರಿಗೆ ಹೆಚ್ಚಿಸಿದ್ದು, ಜನರಿಗೆ ನೀಡಿದ ಶೇ 90 ರಷ್ಟು ಆಶ್ವಾಸನೆಗಳನ್ನು ಈಡೇರಿಸಿಲ್ಲ. ಜಿಲ್ಲೆಯ ಜನತೆ ಶಾಂತಿ, ಸೌಹಾರ್ದಯುತ ಬದುಕನ್ನು ನಿರೀಕ್ಷಿಸುತ್ತಿದ್ದು, ಕಾಂಗ್ರೆಸ್ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಲಿದೆ ಎಂದು ಅವರು ನುಡಿದರು.
ಕಾಂಗ್ರೆಸ್ ಮುಖಂಡರಾದ ಸೇಸಮ್ಮ, ಪ್ರಕಾಶ್ ಸಾಲಿಯಾನ್,ಸುನಿಲ್ ಕುಮಾರ್, ಟಿ. ಕೆ. ಸುಧೀರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು