5:42 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ

09/04/2026, 18:42

ಬಾಗಲಕೋಟೆ(reporterkarnataka.com):ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬೆಳ್ಳಂಬೆಳಿಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದ ವೀರಣ್ಣ ಚರಂತಿಮಠ ಅವರು, ಈ ಬಾರಿಯ ವಾತಾವರಣ ಚೆನ್ನಾಗಿದೆ ಎಂದರು. ಇದೇ ವೇಳೆ, ಕಾಂಗ್ರೆಸ್ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್‌ನವರು ಲಕ್ಷಾಂತರ, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ ಹೊರಗಿನವರು ಬಂದು ಬೀಡುಬಿಟ್ಟಿದ್ದಾರೆ ಎಂದು ಚುನಾವಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದರು. ಎಲ್ಲ ಯುವಕ, ಯುವತಿಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾರತೀಯ ಜನತಾ ಪಕ್ಷದ ಕಮಲದ ಗುರುತಿಗೆ ಮತ ಹಾಕುವಂತೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು