7:55 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಬಿಜೆಪಿ ಹೇಳಿದ್ರೆ ಕುಮಾರಸ್ವಾಮಿ ಅವರು ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ: ಸಚಿವ ಚೆಲುವರಾಯಸ್ವಾಮಿ ಲೇವಡಿ

22/11/2023, 10:18

ಮಂಡ್ಯ(reporterkarnataka.com): ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.‌
ಕುಮಾರಸ್ವಾಮಿ ಅವರು ಬಿಜೆಪಿ ಅವರು ಹೇಳಿದರೆ ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ.
ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ನಾವು ಜಾತ್ಯತೀತ ಅಂದರು. ಮುಸ್ಲಿಂ, ದಲಿತ, ಹಿಂದುಳಿದವರ ಪರ ಅಂದು ಜಾತ್ಯತೀತ ಅಂತಾ ಹೆಸರಿಟ್ಟುಕೊಂಡಿದ್ದರು. ಈಗ ದತ್ತ ಮಾಲೆ ಹಾಕುತ್ತೀನಿ ಎನ್ನುತ್ತಾರೆ. ಯಾವುದನ್ನು ಹಾಕಿಕೊಳ್ಳುತ್ತಾರೋ ಯಾರ ಪರ, ಯಾವ ಸಮಾಜದ ಪರ ನಿಲ್ಲುತ್ತಾರೋ ನಮಗೆ ಗೊತ್ತಿಲ್ಲ ಎಂದು ಚೆಲುವರಾಯಸ್ವಾಮಿ ನುಡಿದರು.
ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತ ಹೇಳುತ್ತಿದ್ದಾರೆ. ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಪೆನ್ ಡ್ರೈವ್ ಬಿಡುಗಡೆ ಮಾಡಿ ಅಂತಾ ಹೇಳಿದ್ದೆವು. ಆದರೆ ಈಗ ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತಾ ಹೇಳಿದ್ದಾರೆ ಎನ್ನುತ್ತಾರೆ. ಅದ್ಯಾವ ಮಂತ್ರಿ ಅಂತಾ ಹೇಳಲಿ ಎಂದು ಸಚಿವರು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು