8:07 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ?

30/04/2022, 18:25

ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸರಿ. ಇದೆಲ್ಲವನ್ನು ಅರಿತೇ ಸಂಪುಟ ಪುನಾರಚನೆಯ ಬಗ್ಗೆ ಪಕ್ಷದ ಹೈಕಮಾಂಡ್ ಇದುವರೆಗೆ ತೀರ್ಮಾನ ಕೈಗೊಂಡಿಲ್ಲ.

ಯುಗಾದಿ ಬೆನ್ನಲ್ಲೇ ರಾಜ್ಯ ಸಂಪುಟ ಪುನಾರಚನೆ ಎನ್ನಲಾಗಿತ್ತು. ಇದೀಗ ಏಪ್ರಿಲ್ ತಿಂಗಳ 1ನೇ, 2ನೇ, 3ನೇ ವಾರ ಕಳೆದು 4ನೇ ವಾರವೂ ಮುಗಿದು ಹೋಯಿತು. ಆದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲೇ ಇಲ್ಲ. ರಾಜ್ಯ ಸಂಪುಟದಲ್ಲಿ ಇದೀಗ 5 ಸ್ಥಾನಗಳು ಖಾಲಿ ಇವೆ. ಇನ್ನು 4 ಮಂದಿಯನ್ನು ಕೈಬಿಟ್ಟರೆ 9 ಮಂದಿಯನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಿದೆ. ಆದರೆ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ವಲ್ಪ ಎಡವಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ. ಇದನ್ನೆಲ್ಲ ಮನಗಂಡೇ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹಿಂದೇಟು ಹಾಕುತ್ತಿದೆ.

ಪಕ್ಷದ ಇನ್ನೊಂದು ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯೊಲ್ಲ. ಬದಲಿಗೆ ಮುಖ್ಯಮಂತ್ರಿಯ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಚಿಂತಿಸುತ್ತಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೋಲಿಸಿದರೆ ಬೊಮ್ಮಾಯಿ ಅವರ ಪ್ರಭಾವ ಏನೂ ಸಾಲದು ಎನ್ನುವ ತೀರ್ಮಾನಕ್ಕೆ ಕೇಸರಿ ವರಿಷ್ಠರು ಬಂದಿದ್ದಾರೆ ಎನ್ನಲಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿ, ಮುಖ್ಯಮಂತ್ರಿ ಸ್ಥಾನವನ್ನು ಒಕ್ಕಲಿಗರಿಗೆ ಕೊಡುವ ಕುರಿತು ಕೂಡ ಚಿಂತನೆ ನಡೆದಿದೆ ಎನ್ನಲಾಗಿದೆ. ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪ್ರಭಾವೀ ಒಕ್ಕಲಿಗ ನಾಯಕನಿಗೆ ಪಟ್ಟ ಕಟ್ಟುವ ಬಗ್ಗೆ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು