ಇತ್ತೀಚಿನ ಸುದ್ದಿ
ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್
01/12/2021, 20:14
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಪುತ್ರ ವಿಜಯೇಂದ್ರ ಅವರು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ ಅವರು ದೂರು ನೀಡಿದ್ದರು. ಅಂತಹ ಬಿಜೆಪಿ ನಾಯಕರಿಗೆ ತಾವು ಶ್ರೀರಾಮಚಂದ್ರನ ಮೊಮ್ಮಕ್ಕಳು ಎಂದು ಹೇಳಿಕೊಳ್ಳಲು ನಾಚಿಕೆ ಆಗಲ್ವಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ವಾಗ್ದಾಳಿ ನಡೆಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಮೊದಲ ಬಾರಿ ಅಧಿಕಾರಕ್ಕೆ ಬಂದಾಗ ಬಿಜೆಪಿ ಮೂವರು ಮುಖ್ಯಮಂತ್ರಿಗಳನ್ನು ಕಂಡಿತು.
3 ಪಕ್ಷಗಳಾಗಿ ವಿಭಜನೆಯಾಯಿತು. ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡಲು ನೈತಿಕತೆ ಏನಿದೆ ಎಂದು ಅವರು ಪ್ರಶ್ನಿಸಿದರು.
ಈ ಮುಖ್ಯಮಂತ್ರಿಯೂ ಬದಲಾಗ್ತಾರೆ ಅನ್ನೋ ಮುನ್ಸೂಚನೆಯನ್ನ ಈಶ್ವರಪ್ಪ ನೀಡಿದ್ದಾರೆ. ನಿಜವಾಗಿ ಹೈಕಮಾಂಡ್ ಇದನ್ನು ಹೇಳಬೇಕಿತ್ತು.
ನಳಿನ್ ಕುಮಾರ್ ಕಟೀಲ್, ಈಶ್ವರಪ್ಪ, ಸಿ.ಟಿ.ರವಿ ಅವರಿಂದ ಆರೆಸ್ಸೆಸ್ ಈ ಹೇಳಿಕೆ ಕೊಡಿಸುತ್ತಿದೆ ಎಂದರು.