ಇತ್ತೀಚಿನ ಸುದ್ದಿ
ಬಿಜೆಪಿ ಜತೆ ಸಖ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆ ಕುಮಾರಸ್ವಾಮಿ ಮಾತುಕತೆ
23/09/2023, 08:39

ಹೊಸದಿಲ್ಲಿ(reporterkarnataka.com): ಬಿಜೆಪಿ ಜತೆಗೆ ಸಖ್ಯ ನಡೆಸುವ ಕುರಿತು ದೆಹಲಿಗೆ ತೆರಳಿದ ಜನತಾ ದಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ದೆಹಲಿಯಲ್ಲಿರುವ ಗೃಹ ಸಚಿವರ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಲಾಯಿತು. ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಜನತಾ ದಳ ಹಿರಿಯ ಮುಖಂಡರು ಕುಪೇಂದ್ರ ರೆಡ್ಡಿ ಅವರು, ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಅವರು ಉಪಸ್ಥಿತರಿದ್ದರು.