ಇತ್ತೀಚಿನ ಸುದ್ದಿ
ಬಿಜೆಪಿ ಜತೆ ಸಖ್ಯ: ಮಾತುಕತೆ ನಡೆಸಲು ಪುತ್ರ ನಿಖಿಲ್ ಜತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ
21/09/2023, 13:33
ಬೆಂಗಳೂರು(reporterkarnataka.com): ಜೆಡಿಎಸ್ ಶಾಸಕರ ವಿರೋಧದ ನಡುವೆಯೂ ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಸಲು ಗುರುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪುತ್ರನ ಜತೆ ದೆಹಲಿಗೆ ತೆರಳಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್ಪೋರ್ಟ್ ಗೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಬೆಳಗ್ಗೆ 9:50ರ ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಗೆ ತೆರಳಿದರು.