5:17 AM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಅರಣ್ಯ ಸಚಿವ ಈಶ್ವರ ಖಂಡ್ರೆ

24/09/2023, 19:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ. ಬಿಜೆಪಿ-ಜೆಡಿಎಸ್ ಇಬ್ಬರ ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಮಾಧ್ಯಮ ಜತೆ ಮಾತನಾಡಿ,ಬಿಜೆಪಿ-ಜೆಡಿಎಸ್ ಹೊಟ್ಟೆಕಿಚ್ಚಿನಿಂದ ಕೈ-ಕೈ ಹಿಸುಕಿಕೊಳ್ತಿದ್ದಾರೆ. ಹೊಟ್ಟೆಕಿಚ್ಚಿನಿಂದ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ.ಅವರಿಗೆ ತಮ್ಮ ಅಸ್ತಿತ್ವವೇ ಹೋಗುತ್ತೆ, ಕಾಂಗ್ರೆಸ್ ಮುಂದೆ ನಾವು ಏನು ಇರಲ್ಲ ಅನ್ನಿಸಿದೆ ಎಂದು ಸಚಿವರು ನುಡಿದರು.ಅವರಿಗೆ ಯಾವುದೇ ಕೆಲಸ ಇಲ್ಲದ ಕಾರಣ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಮಾತುಗಳಲ್ಲಿ ಹುರುಳಿಲ್ಲ, ಕಾಂಗ್ರೆಸ್ಸಿಗೆ ಅವರಿಂದ ನಷ್ಟವೂ ಇಲ್ಲ.ಲೋಕಸಭೆಯಲ್ಲಿ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಅವರು ನುಡಿದರು.ಗ್ಯಾರಂಟಿಯಿಂದಲೇ ಕಾಂಗ್ರೆಸ್ ಪೂರ್ಣ ಬಹುಮತದ ಸರ್ಕಾರ ಬಂದಿದೆ. ಕೊಟ್ಟ ಮಾತನ್ನ ಉಳಿಸಿಕೊಂಡು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ. ಕಾವೇರಿ ನದಿ ನೀರು ವಿವಾದ ಕುರಿತು ಮಾತನಾಡಿದ ಅವರು, ರಾಜ್ಯದ ನೆಲ-ಜಲ ಕಾಪಾಡುವುದು ನಮ್ಮಲ್ಲೆರ ಕರ್ತವ್ಯ.ಆ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಕಾವೇರಿ ನೀರು ಬಳಕೆ ಮಾಡುವುದು.ನಮ್ಮ ರೈತರ ಅನೂಕುಲಕ್ಕಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ತಜ್ಞರು, ಹಿರಿಯರ ಜೊತೆ ನಿರಂತರ ಚರ್ಚೆ ನಡೆಯುತ್ತಿದೆ.ಸರ್ವ ಪಕ್ಷ ಸಭೆ ಕರೆದು ಕೂಡ ಚರ್ಚೆ ಮಾಡಲಾಗಿದೆ. ಕೇಂದ್ರದ ಗಮನಕ್ಕೆ ತಂದು ಸರ್ವೋಚ್ಚ ನ್ಯಾಯಲಯದಲ್ಲಿ ವಾದ ಮಂಡಿಸಲಿದ್ದೇವೆ. ನಮ್ಮ ರಾಜ್ಯಕ್ಕೆ ಆ ಭಾಗದ ರೈತರು, ಜನರಿಗೆ ಆನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು