5:46 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬಿಜೆಪಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್: ಕಾಂಗ್ರೆಸ್ ವಕ್ತಾರರು ಹೇಳಿದ್ದೇನು?

30/06/2023, 21:22

ಕಾರ್ಕಳ(reporterkarnataka.com): ಬಿಜೆಪಿ ಚಟುವಟಿಕೆ ನಡೆಯುವ ಪಕ್ಷದ ಕಚೇರಿ ಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಸರಕಾರಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು ಇದು ಕಾನೂನುಬಾಹಿರ ಹಾಗೂ ಶಿಷ್ಟಾಚಾರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ಶುಭದ ರಾವ್ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಭಾಗವಹಿಸುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಸರಕಾರವೇ ಶಾಸಕರಿಗಾಗಿ ಕಚೇರಿಯನ್ನು ಒದಗಿಸಿಕೊಡುತ್ತದೆ. ಕಾರ್ಕಳದಲ್ಲಿ ಕೂಡ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಶಾಸಕರ ಕಚೇರಿ ಇದೆ. ಅಧಿಕಾರಿಗಳ ಸಭೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಮೊದಲಾದ ಸರಕಾರಿ ಕಾರ್ಯಕ್ರಮಗಳು ಅಲ್ಲಿಯೇ ನಡೆಯಬೇಕು, ವಿನಹ ಪಕ್ಷದ ಚಟುವಟಿಕೆಗಳು ನಡೆಯುವ ಪಕ್ಷದ ಕಚೇರಿಯಲ್ಲಿ ಅಲ್ಲ, ಶಾಸಕ ಸುನೀಲ್ ಕುಮಾರ್ ಇದಕ್ಕೆ ವಿರುದ್ಧವಾಗಿ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಾರೆ. ಫಲಾನುಭವಿಗಳಿಗೆ ಸರಕಾರದ ಸವಲತ್ತುಗಳನ್ನು ವಿತರಿಸುತ್ತಾರೆ. ಯಾವುದೇ ಫಲಾನುಭವಿಗಳು ಒಂದು ಪಕ್ಷಕ್ಕೆ ಸೀಮಿತವಲ್ಲ. ಆದ್ದರಿಂದ ಅವರನ್ನು ಪಕ್ಷದ ಕಚೇರಿಗೆ ಬರಲು ಒತ್ತಡ ಹೇರಿದಂತಾಗುತ್ತದೆ. ಇದು ಕಾನೂನುಬಾಹಿರ ಹಾಗೂ ಶಿಷ್ಟಾಚಾರ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ಜಿಲ್ಲಾದಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲಾಗುವುದು. ಸಭೆಯಲ್ಲಿ ಭಾಗವಹಿಸುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿ ಸಾರ್ವಜನಿಕರ ಮನವಿಗೆ ಸ್ಪಂದಿಸಿ ಸರಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದನ್ನೇ ದೊಡ್ಡ ಅಪರಾಧ ಎಂಬಂತೆ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ನೋಟೀಸು ಜಾರಿ ಮಾಡಿಸಿದ್ದೀರಿ. ಇದರಿಂದ ಅವರು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ವೈದ್ಯರಿಗೆ ನೋಟೀಸು ನೀಡುವಲ್ಲಿ ವಹಿಸಿದ ಆಸಕ್ತಿ ವೈದ್ಯರ ಮತ್ತು ಸಿಬ್ಬಂದಿಗಳ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ತೋರಿಸುತ್ತಿದ್ದರೆ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗುತ್ತಿತ್ತು. ಅದು ನಿಮ್ಮಿಂದ ಯಾಕೆ ಸಾದ್ಯವಾಗಲಿಲ್ಲ ? ಅಧಿಕಾರವಿದೆ ಎನ್ನುವ ಮಾತ್ರಕ್ಕೆ ನ್ಯಾಯದಲ್ಲಿ ವ್ಯತ್ಯಾಸವಿದೆಯೇ? ಇಲ್ಲಿ ತಮಗೊಂದು ಕಾನೂನು ವೈದ್ಯರಿಗೊಂದು ಕಾನೂನೇ ? ಎಂದು ಶಾಸಕರನ್ನು ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು