12:42 PM Saturday7 - November 2026
ಬ್ರೇಕಿಂಗ್ ನ್ಯೂಸ್
Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |…

ಇತ್ತೀಚಿನ ಸುದ್ದಿ

BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ

26/07/2025, 17:32

ಬೆಂಗಳೂರು(reporterkarnataka.com): ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಅತಂತ್ರವಾಗಿ ಐದು ಭಾಗ ಮಾಡಲಾಗಿದೆ. ರಾಜಕೀಯ ದೃಷ್ಟಿಯಿಂದ ಹಾಗೂ ಕಾಂಗ್ರೆಸ್‌ ಗೆಲ್ಲಬೇಕೆಂಬ ಗುರಿಯಿಂದ ವಿಭಜನೆ ಮಾಡಲಾಗಿದೆ. ಐದು ಪಾಲಿಕೆಗಳ ನಡುವೆ ತಾರತಮ್ಯ ಉಂಟಾಗಲಿದೆ. ಇದರ ವಿರುದ್ಧ ಕೋರ್ಟ್‌ ಮೊರೆ ಹೋಗಿ ಹೋರಾಟ ಮಾಡಲಾಗುವುದು. ಬೆಂಗಳೂರನ್ನು ಒಡೆಯಿರಿ ಎಂದು ಜನರು ಕೇಳಿಲ್ಲ. ಈಗಾಗಲೇ ನಗರದಲ್ಲಿ ತೆರಿಗೆ, ಸೆಸ್‌, ಇ ಖಾತಾದಿಂದ ಸಮಸ್ಯೆ ಉಂಟುಮಾಡಿದ್ದಾರೆ. ಇಂತಹ ಸಮಯದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಖಚಿತವಾಗಿದೆ. ಅದನ್ನು ತಪ್ಪಿಸಲು ಹೀಗೆ ಭಾಗ ಮಾಡಿದ್ದಾರೆ ಎಂದರು.
ಕಪ್ಪು ಪಟ್ಟಿಯಲ್ಲಿರುವ ಗುತ್ತಿಗೆದಾರರಿಗೆ ಸುರಂಗ ರಸ್ತೆ ಯೋಜನೆಯನ್ನು ನೀಡಲಾಗುತ್ತಿದೆ. ಸುರಂಗ ರಸ್ತೆಗೆ ಟೋಲ್‌ ಕೂಡ ಇರುವುದರಿಂದ ಶ್ರೀಮಂತರು ಮಾತ್ರ ಇದನ್ನು ಬಳಸಬಹುದು. ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಿಲ್ಲ. ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಆದರೆ ದುಡ್ಡು ಕೊಳ್ಳೆ ಹೊಡೆಯುವ ಯೋಜನೆಗಳನ್ನು ವಿರೋಧಿಸುತ್ತೇವೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಎಂದರು.
ಹೆಬ್ಬಾಳ ಮೇಲ್ಸೇತುವೆ ಬಳಿಯ ಜಂಕ್ಷನ್‌ಗೆ ಎಲ್ಲ ಕಡೆಯಿಂದ ವಾಹನಗಳು ಬರುತ್ತವೆ. ಅಂತಹ ಜಾಗವನ್ನು ಖಾಸಗಿ ಭೂ ಮಾಲೀಕರಿಗೆ ನೀಡಲು ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಸದನದಲ್ಲಿ ಚರ್ಚಿಸಲಾಗುವುದು. ಇ ಖಾತಾ ವಿಚಾರದಲ್ಲಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಹಣ ಲೂಟಿ ಮಾಡಲು ಬೆಂಗಳೂರನ್ನು ಬಳಸಬಾರದು ಎಂದು ಅವರು ನುಡಿದರು.
ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಹೋಳು ಮಾಡುತ್ತಿದೆ. ಎಲ್ಲೆಡೆ ಟ್ರಾಫಿಕ್‌ ಹಾಗೂ ಕಸದ ಸಮಸ್ಯೆ ಕಾಣುತ್ತಿದೆ. ಹೋಳು ಮಾಡುವುದರಿಂದ ಅಭಿವೃದ್ಧಿಯಾಗುವುದಿಲ್ಲ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಅನುದಾನವಿಲ್ಲದೆ ಅಭಿವೃದ್ಧಿ ಶೂನ್ಯವಾಗಿದೆ. ಹೊಸ ಪಾಲಿಕೆಗಳ ರಚನೆಯಿಂದ ಬೆಂಗಳೂರು ಜನರ ಹೃದಯ ಚೂರಾಗಲಿದೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಹಳೆ ಮೈಸೂರು ಭಾಗಕ್ಕೆ ನೀಡಿದ ಕೊಡುಗೆಯನ್ನು ನಾವು ಸ್ಮರಿಸಬೇಕು. ಕೆಆರ್‌ಎಸ್‌ ಜಲಾಶಯದಿಂದಾಗಿ ಜನರಿಗೆ ಜೀವಜಲ ದೊರೆತಿದೆ. ಅವರ ಸಾಧನೆಗಳಿಂದಾಗಿ ಜನರು ಅನ್ನ ತಿನ್ನುತ್ತಿದ್ದಾರೆ. ಸೋಪ್‌ ಫ್ಯಾಕ್ಟರಿ, ವಿಶ್ವವಿದ್ಯಾಲಯಗಳ ನಿರ್ಮಾಣ, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದವರೇ ಅವರು. ಚಿನ್ನಾಭರಣ ಅಡವಿಟ್ಟು ಜಲಾಶಯ ನಿರ್ಮಿಸಿದವರಿಗೂ, ಮುಡಾದಲ್ಲಿ 14 ಸೈಟುಗಳನ್ನು ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು. ಯತೀಂದ್ರ ಸಿದ್ದರಾಮಯ್ಯ ಮಹಾರಾಜರ ಕುಟುಂಬಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಬೇಕು ಎಂದರು.
ಹುಲಿಗಳು ಸಾಯುವುದನ್ನು ನೋಡಿದರೆ ಅರಣ್ಯ ಇಲಾಖೆ ಸತ್ತುಹೋಗಿದೆ ಎಂದೆನಿಸುತ್ತದೆ. ಈ ನಡುವೆ ಗೋವುಗಳನ್ನು ಅರಣ್ಯದಲ್ಲಿ ಮೇಯಿಸುವಂತಿಲ್ಲ ಎಂಬ ಆದೇಶ ನೀಡಲಾಗಿದೆ. ಇಂತಹ ಕ್ರಮ ಒಳ್ಳೆಯದಲ್ಲ ಎಂದರು.
136 ಸೀಟುಗಳನ್ನು ಗೆದ್ದಿರುವ ಬಗ್ಗೆ ನಮಗೂ ಅನುಮಾನವಿದೆ ಎಂದು ನಾವು ಹೇಳಬಹುದು. ಚುನಾವಣೆಯಲ್ಲಿ ಸೋತಾಗ ಸಾಕ್ಷಿ ಕೇಳುತ್ತಾರೆ. ಭಯೋತ್ಪಾದಕರ ಮೇಲೆ ದಾಳಿ ಮಾಡಿದಾಗಲೂ ಹೀಗೆ ಸಾಕ್ಷಿ ಕೇಳಿದ್ದರು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು