1:24 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸುವರ್ಣ ಸೌಧದಿಂದಲೇ ಬಿಜೆಪಿ ನಾಯಕ ಸಿ.ಟಿ. ರವಿ ಬಂಧನ

19/12/2024, 20:47

ಬೆಳಗಾವಿ ಸುವರ್ಣ ಸೌಧ(reporterkarnataka.com)
: ವಿಧಾನ ಪರಿಷತ್ ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಸಿ.ಟಿ. ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲೇ ಹಿರೇಬಾಗೇವಾಡಿ ಪೊಲೀಸರು, ಸಿ.ಟಿ. ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ.
*ಸಿಎಂ ಹೇಳಿದ್ದೇನು?:*
ಸಚಿವೆ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ವಿಧಾನ ಪರಿಷತ್ ಸಭಾಪತಿ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದೆ ಎಂದು ಈ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.
ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದಿದ್ದರು.
ಸಿ.ಟಿ. ರವಿ ಅವರು ಅವಾಚ್ಯ ಪದ ಬಳಸಿದ್ದಾರೆಂದು ಹಲವು ಸದಸ್ಯರು ಹೇಳುತ್ತಿದ್ದು, ತಾನು ವಿಧಾನ ಪರಿಷತ್ತಿನಲ್ಲಿ ಇರಲಿಲ್ಲ ಎಂದು ತಿಳಿಸಿದ್ದ ಮುಖ್ಯಮಂತ್ರಿ , ಪದ ಪ್ರಯೋಗದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನನೊಂದಿದ್ದು, ಇಂತಹ ಪದಬಳಕೆ ಒಂದು ರೀತಿಯ ಲೈಂಗಿಕ ದೌರ್ಜನ್ಯವಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.
ಈ ನಡುವೆ ಸಿ.ಟಿ. ರವಿ ಅವರು ಅವಾಚ್ಯ ಪದ ಬಳಸಿರುವುದನ್ನು ನಿರಾಕರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು