12:17 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಆರೋಪಿ ಉಮರ್ ಫಾರೂಕ್ ಬಂಧನ

06/08/2026, 18:48

ಮಂಗಳೂರು(reporterkarnataka.com): ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ಉಮರ್ ಫಾರೂಕ್‌ನನ್ನು ಬಂಧಿಸಿದೆ.
ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎನ್‌ಐಎ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಮಹತ್ವದ ಯಶಸ್ಸು ದೊರೆತಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದು, ಎನ್‌ಐಎ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಉಮರ್ ಫಾರೂಕ್ನನ್ನು ಬಂಧಿಸಲಾಗಿದೆ.
ಕೇರಳದ ಕೊಚ್ಚಿಯಲ್ಲಿ ಎನ್ ಐ ಎ ಅಧಿಕಾರಿಗಳು ಆರೋಪಿ ಉಮರ್ ಫಾರೂಕ್‌ನನ್ನು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಇದುವರೆಗೆ 25 ಮಂದಿಯನ್ನು ಬಂಧಿಸಲಾಗಿದೆ. ಉಮರ್ ಫಾರೂಕ್ ಬಂಧನಕ್ಕೆ NIA 4 ಲಕ್ಷ ಬಹುಮಾನ ಕೂಡ ಘೋಷಿಸಿತ್ತು. ಇನ್ನೂ. ಇಬ್ಬರು ಆರೋಪಿಗಳ ಬಂಧನಕ್ಕೆ ಎನ್ ಐ ಎ ಶೋಧ ನಡೆಸಿದೆ. ಉಮರ್ ಫಾರೂಕ್ ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಎನ್‌ಐಎ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.ಪ್ರಾಥಮಿಕ ಮಾಹಿತಿ ಪ್ರಕಾರ, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಚು, ಆರೋಪಿಗಳಿಗೆ ಆಶ್ರಯ ನೀಡಿರುವುದು ಹಾಗೂ ಇತರ ಪ್ರಮುಖ ಅಂಶಗಳ ಕುರಿತು ಉಮರ್ ಫಾರೂಕ್‌ನಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆತನ ವಿಚಾರಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ಇನ್ನಷ್ಟು ಮಹತ್ವದ ಮಾಹಿತಿ ಹೊರಬರುವ ಸಾಧ್ಯತೆ ಇದೆ ಎಂದು ತನಿಖಾ ಮೂಲಗಳು ತಿಳಿಸಿವೆ.
ಈ ಬಂಧನದೊಂದಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಗೆ ಹೊಸ ವೇಗ ಸಿಕ್ಕಿದ್ದು, ಉಳಿದ ಆರೋಪಿಗಳ ವಿರುದ್ಧವೂ ಎನ್‌ಐಎ ಕಾರ್ಯಾಚರಣೆ ಮುಂದುವರಿಸಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆ ಪೂರ್ಣಗೊಂಡ ಬಳಿಕ ಬಹಿರಂಗವಾಗುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು