12:15 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿಜೆಪಿ ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ, ಎಂ.ಪಿ. ಕುಮಾರಸ್ವಾಮಿ ಕಾಂಗ್ರೆಸ್ ಗೆ ಸೇರ್ಪಡೆ

12/03/2024, 22:57

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದೇಶಾದ್ಯಂತ ಪಕ್ಷಾಂತರ ಪರ್ವ ಆರಂಭವಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೂಡಿಗೆರೆ ಮಾಜಿ ಶಾಸಕ ಎಂ. ಪಿ. ಕುಮಾರಸ್ವಾಮಿ ಹಾಗೂ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ. ಎಂ. ಸುಕುಮಾರ್‌ ಶೆಟ್ಟಿ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಖ ಡಿ. ಕೆ. ಶಿವಕುಮಾರ್ ಸಮಕ್ಷಮದಲ್ಲಿ ಕಾಂಗ್ರೆಸ್ ಸೇರಿದ್ದಾರೆ.
ಬೈಂದೂರು ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಬಿ. ಎಂ. ಸುಕುಮಾರ್ ಶೆಟ್ಟಿಗೆ ಅವರಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ
ಟಿಕೆಟ್ ನೀಡಿರಲಿಲ್ಲ. ಇದೀಗ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಅವರು ಕಾಂಗ್ರೆಸ್ ಸೇರಿದ್ದಾರೆ.
ಎಂ. ಪಿ. ಕುಮಾರಸ್ವಾಮಿ ಅವರಿಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಮೂಡಿಗೆರೆಯಿಂದ ಮತ್ತೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಕಾಂಗ್ರೆಸ್ ಟಿಕೆಟ್ ಗೆ ಪ್ರಯತ್ನಿಸಿದ್ದ ಅವರು
ಜೆಡಿಎಸ್‌ನಿಂದ ಮೂಡಿಗೆರೆಯಲ್ಲಿ ಕಣಕ್ಕಿಳಿದು ಸೋಲು ಕಂಡಿದ್ದರು. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಗೆಲುವು ಸಾಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು