11:18 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಡ್ಯಾರು ಮಹಾಶಕ್ತಿ ಕೇಂದ್ರದ ವಿಶೇಷ ಸಭೆ: ಸದಸ್ಯತ್ವ ಅಭಿಯಾನ ಚರ್ಚೆ

17/09/2024, 10:52

ಸುರತ್ಕಲ್(reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಡ್ಯಾರು ಮಹಾಶಕ್ತಿ ಕೇಂದ್ರದ ವಿಶೇಷ ಸಭೆಯು ಶಾಸಕ ಡಾ. ವೈ. ಭರತ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನೀರುಮಾರ್ಗದ
ಶ್ರೀ ಸುಬ್ರಹ್ಮಣ್ಯ ಭಜನಾ ಈಮಂದಿರದಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಸದಸ್ಯತ್ವ ಅಭಿಯಾನದ ಮತ್ತು ಪಕ್ಷ ಸಂಘಟನೆಯ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.


ಮಹಾ ಶಕ್ತಿಕೇಂದ್ರದ ಕಾರ್ಯದರ್ಶಿ ಅಜಿತ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಮಾತನಾಡಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ಮನೆ ಮನೆ ಸಂಪರ್ಕ ಮಾಡುವಂತೆ ತಿಳಿಸಿದರು.
ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾದ ಕಮಲಾಕ್ಷ, ಉಳಾಯಿಬೆಟ್ಟು ಪಂಚಾಯತ್ ಅಧ್ಯಕ್ಷರಾದ ಹರಿಕೇಶ್, ಜಿಲ್ಲಾ ಸಮಿತಿಯ ಸದಸ್ಯರಾದ ಗೋಕುಲ್ ದಾಸ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಸಚಿನ್ ಅಡಪ, ಮಹಾ ಶಕ್ತಿಕೇಂದ್ರದ ಸಮಿತಿಯ ಸದಸ್ಯರಾದ ಸುಧೀರ್ ಕಾಮತ್, ಕಿಶೋರ್ ಉಗ್ಗಕೋಡಿ, ಯಶವಂತಿ ಮಲ್ಲೂರು ಹಾಗೂ ಜಿಲ್ಲಾ, ಮಂಡಲ ಮೋರ್ಚಾ ಪಧಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು,ಗ್ರಾಮ ಸಮಿತಿಯ ಅಧ್ಯಕ್ಷ, ಕಾರ್ಯದರ್ಶಿ,ಬೂತ್ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಡಲ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೋಹನ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು