6:55 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

BJP MLAS SUSPENDED | ಸ್ಪೀಕರ್ ಪೀಠಕ್ಕೆ ಅಗೌರವ: ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ ಸಹಿತ 18 ಬಿಜೆಪಿ ಶಾಸಕರ 6 ತಿಂಗಳ ಕಾಲ ಅಮಾನತು

21/03/2025, 21:04

ಬೆಂಗಳೂರು(reporterkarnataka.com): ವಿಧಾನ ಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿಯ 18 ಮಂದಿ ಶಾಸಕರನ್ನು ಕಲಾಪದಿಂದ 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣ ಖಂಡಿಸಿ, ಪ್ರಕರಣದ ಸಿಬಿಐ ತನಿಖೆ ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು. ಆಡಳಿತ ಪಕ್ಷದ ವಿರುದ್ಧ ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಸ್ಪೀಕರ್ ಪೀಠದ ಮೇಲೇರಿ ಬಂದ ಬಿಜೆಪಿ ಸದಸ್ಯರು ತಮ್ಮ ಆಕ್ರೋಶ ಹೊರಹಾಕಿದ್ದರು. ಗದ್ದಲ ಕೋಲಾಹಲದ ನಡುವೆ ಸ್ಪೀಕರ್ ಪೀಠದ ಮೇಲೆ ಬಿಜೆಪಿ ಸದಸ್ಯರು ಕಾಗದ ಪ್ರತಿಗಳನ್ನು ಹರಿದು ಎಸೆದಿದ್ದರು. ಈ ಹಿನ್ನೆಲೆ ಪೀಠಕ್ಕೆ ಅಗೌರವ ತೋರಿದ 18 ಮಂದಿ ಬಿಜೆಪಿ ಸದಸ್ಯರನ್ನು ಸದನ ಕಲಾಪದಿಂದ 6 ತಿಂಗಳಿಗೆ ಅಮಾನತುಗೊಳಿಸಿ ಸ್ಪೀಕರ್ ರೂಲಿಂಗ್ ನೀಡಿದರು.
ಅಮಾನತುಗೊಂಡವರು: ಬಿಜೆಪಿ ಶಾಸಕರಾದ ದೊಡ್ಡಣ್ಣ ಗೌಡ ಪಾಟೀಲ್, ಎಸ್.ಆರ್ ವಿಶ್ವನಾಥ್, ಅಶ್ವತ್ಥ್ ನಾರಾಯಣ್, ಚೆನ್ನಬಸಪ್ಪ, ಉಮನಾಥ್ ಕೋಟ್ಯಾನ್, ಯಶಪಾಲ್ ಸುವರ್ಣ, ಹರೀಶ್ ಬಿ.ಪಿ., ಚಂದ್ರು ಲಮಾಣಿ, ಶರಣು ಸಲಗಾರ್, ಶೈಲೇಂದ್ರ ಬೆಳ್ದಾಳೆ, ಸಿ.ಕೆ.ರಾಮಮೂರ್ತಿ, ಮುನಿರತ್ನ, ಧೀರಜ್ ಮುನಿರಾಜ್, ಡಾ. ಭರತ್ ಶೆಟ್ಟಿ, ಬಸವರಾಜ್ ಮತ್ತಿಮೂಡ್, ಸುರೇಶ್ ಗೌಡ, ಬಿ.ಬಸವರಾಜ್, ಎಂ.ಆರ್.ಪಾಟೀಲ್ ಅವರನ್ನು 6 ತಿಂಗಳಿಗೆ ವಿಧಾನಸಭೆ ಕಲಾಪದಿಂದ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು