8:47 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ರಾಜ್ಯಕ್ಕೆ ಅಧಿಕ ರಸಗೊಬ್ಬರ ತರಲು ಜೋಶಿ ಸಾರಥ್ಯ: ರಸಗೊಬ್ಬರ ಸಚಿವ ನಡ್ಡಾರಿಗೆ ಬಿಜೆಪಿ ಸಂಸದರ ಮನವಿ

28/07/2025, 22:29

ನವದೆಹಲಿ(reporterkarnataka.com): ಕರ್ನಾಟಕದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಅಧಿಕ ರಸಗೊಬ್ಬರ ಪೂರೈಕೆಗಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಸೇರಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.


ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಒಟ್ಟಾಗಿ ಸೇರಿ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ರೈತರ ಹಿತದೃಷ್ಟಿಯಿಂದ ರಾಜ್ಯಕ್ಕೆ ಮತ್ತಷ್ಟು ಅಧಿಕ ಪ್ರಮಾಣದಲ್ಲಿ ರಸಗೊಬ್ಬರ ಪೂರೈಸುವಂತೆ ಮನವಿ ಸಲ್ಲಿಸಿದರು.

*1.65 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ಸಂಗ್ರಹ:* ರಾಜ್ಯದಲ್ಲಿ ರಸಗೊಬ್ಬರದ ಅಭಾವವಿಲ್ಲ. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರಾಜ್ಯ ಸರ್ಕಾರ ಸಂಗ್ರಹಣೆ ಮಾಡಿಟ್ಟುಕೊಂಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಇದೇ ವೇಳೆ ಮಾಹಿತಿ ನೀಡಿದರು.

*ಸರಿಯಾದ ಕ್ರಮದಲ್ಲಿ ಬಳಸಬೇಕಿದೆ ಅಷ್ಟೇ:* ರಾಜ್ಯದಲ್ಲಿ ರೈತರಿಗೆ ರಸಗೊಬ್ಬರ ಅಭಾವ ಎದುರಾಗಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯ ಪ್ರಮಾಣದ ರಸಗೊಬ್ಬರವನ್ನು ಪೂರೈಸಿದೆ. ಆದರೆ, ರಾಜ್ಯ ಸರ್ಕಾರ ಸರಿಯಾದ ಕ್ರಮದಲ್ಲಿ ಅದನ್ನು ಹಂಚಿಕೆ ಮಾಡಬೇಕಿದೆ ಅಷ್ಟೇ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದ ರೈತರ ಬೆನ್ನೆಲುಬಾಗಿ ನಿಂತಿದೆ. ಎಂಥದ್ದೇ ಸಮಯದಲ್ಲೂ ರೈತರ ಹಿತ ಕಾಪಾಡುವಲ್ಲಿ ಬದ್ಧವಾಗಿದೆ. ಇದು ನಮ್ಮ ಸರ್ಕಾರದ ಧ್ಯೇಯವಾಗಿದ್ದು, ರೈತರಿಗೆ ಮತ್ತಷ್ಟು ಅಗತ್ಯ ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜೋಶಿ ಭರವಸೆ ನೀಡಿದರು.

*ಬೇಡಿಕೆ ಹೆಚ್ಚಿದೆ, ಹೆಚ್ಚು ಪೂರೈಸಿ:* ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಎಲ್ಲೆಡೆ ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಹಾಗಾಗಿ ರಸಗೊಬ್ಬರಕ್ಕೆ ರೈತರಿಂದ ಹೆಚ್ಚಿನ ಬೇಡಿಕೆಯಿದೆ. ಹಾಗಾಗಿ ಮತ್ತಷ್ಟು ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಪೂರೈಸಿ ಎಂದು ಜೋಶಿ ನೇತೃತ್ವದ ಸಂಸದರ ತಂಡ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಜೆಪಿ ನಡ್ಡಾ ಅವರಲ್ಲಿ ಮನವಿ ಮಾಡಿದರು.
ಈಗಾಗಲೇ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರಗಳನ್ನು ರಾಜ್ಯ ಸರ್ಕಾರಕ್ಕೆ ಪೂರೈಸಿದೆ. ಆದಾಗ್ಯೂ ರೈತರಿಂದ ಬೇಡಿಕೆ ಹೆಚ್ಚಿದ ಕಾರಣ ಮತ್ತಷ್ಟು ಅಧಿಕ ಪ್ರಮಾಣದಲ್ಲಿ ಅಗತ್ಯ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಸರಬರಾಜು ಮಾಡಬೇಕು ಎಂದು ಸಂಸದರ ತಂಡ ನಡ್ಡಾ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು